ನವದೆಹಲಿ : ಅಂಡಮಾನ್ ದ್ವೀಪಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.1 ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಮಾಹಿತಿ ನೀಡಿದೆ.
ಅಂಡಮಾನ್ ದ್ವೀಪಗಳಲ್ಲಿ ಬುಧವಾರ ಬೆಳಿಗ್ಗೆ ರಿಕ್ಟರ್ ಮಾಪಕದಲ್ಲಿ 4.1 ರಷ್ಟು ಭೂಕಂಪ ಸಂಭವಿಸಿದೆ. ಭಾರತೀಯ ಕಾಲಮಾನ ಬೆಳಗ್ಗೆ 7.53ಕ್ಕೆ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ.