ಬೆಂಗಳೂರು : ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮನೆಯಲ್ಲಿ ಕಳ್ಳತವಾದ ಘಟನೆ ಬೆಳಕಿಗೆ ಬಂದಿದ್ದು, ಖದೀಮರು 2.50 ಲಕ್ಷ ಹಣ ಕದ್ದೊಯ್ದಿದ್ದಾರೆ.
ಬೆಂಗಳೂರಿನ ಗುರುಕಿರಣ್ ನಿವಾಸದಲ್ಲಿ ಅವರ ಅತ್ತೆ ಕಪಾಟಿನಲ್ಲಿ ಇಟ್ಟಿದ್ದ 2.50 ಲಕ್ಷ ಹಣವನ್ನು ಜ.5 ರಂದು ಖದೀಮರು ಕಳ್ಳತನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಜನವರಿ 7 ರಂದು ಚಂದ್ರಲೇಔಟ್ ಪೊಲೀಸ್ ಠಾಣೆಗೆ ಗುರುಕಿರಣ್ ಅತ್ತೆ ದೂರು ನೀಡಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಅವರ ಮನೆಕೆಲದಾಕೆ ಚಂದ್ರಮ್ಮ ಮೇಲೆ ಅನುಮಾನ ವ್ಯಕ್ತಪಡಿಸಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.