ಹೈದರಾಬಾದ್ : ಚಾರ್ಮಿನಾರ್ ಎಕ್ಸ್ಪ್ರೆಸ್ ರೈಲು ಬುಧವಾರ ಬೆಳಿಗ್ಗೆ ನಾಂಪಲ್ಲಿ ರೈಲ್ವೆ ನಿಲ್ದಾಣದಲ್ಲಿ ಹಳಿ ತಪ್ಪಿ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಚೆನ್ನೈನಿಂದ ಹೈದರಾಬಾದ್ಗೆ ಬರುತ್ತಿದ್ದ ಚಾರ್ಮಿನಾರ್ ಎಕ್ಸ್ಪ್ರೆಸ್ ರೈಲು ಡೆಡ್ ಎಂಡ್ ಲೈನ್ ಬಗ್ಗೆ ಗಮನ ಹರಿಸದ ಕಾರಣ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಹಳಿ ತಪ್ಪಿದ ಘಟನೆಯಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಲಾಲಗುಡ ರೈಲ್ವೆ ಆಸ್ಪತ್ರೆಗೆ ದಾಖಲಿಸಲಾಗಿದೆ.