ಕೊಚ್ಚಿ : ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 16ರಂದು ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಹೌದು, ಅವರು ಈ ಬಾರಿ ಎರ್ನಾಕುಲಂ ಮತ್ತು ತ್ರಿಶೂರ್ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಜನವರಿ 16 ರಂದು ಕೊಚ್ಚಿಯಲ್ಲಿ ರೋಡ್ ಶೋ ನಡೆಯಲಿದೆ.
ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿದ್ದಕ್ಕಾಗಿ ಅವರನ್ನು ಅಭಿನಂದಿಸಲು ಬಿಜೆಪಿ ರಾಜ್ಯ ಘಟಕ ಆಯೋಜಿಸಿದ್ದ ಮಹಿಳಾ ಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಜನವರಿ 3 ರಂದು ಕೇರಳಕ್ಕೆ ಆಗಮಿಸಿದ್ದರು. ಜನವರಿ 17 ರಂದು ಗುರುವಾಯೂರ್ನಲ್ಲಿ ನಡೆಯಲಿರುವ ನಟ-ರಾಜಕಾರಣಿ ಸುರೇಶ್ ಗೋಪಿ ಅವರ ಮಗಳ ಮದುವೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ ಎಂಬ ವರದಿಗಳು ಕೂಡ ಬಂದಿದ್ದವು.
ಇತ್ತೀಚಿನ ಮಾಹಿತಿಯ ಪ್ರಕಾರ, ಪ್ರಧಾನಿ ಮೋದಿ ಜ. 16 ರಂದು ಕೊಚ್ಚಿಗೆ ತಲುಪಲಿದ್ದಾರೆ. ಸಂಜೆ 5 ಗಂಟೆಗೆ ರೋಡ್ ಶೋ ನಡೆಯಲಿದೆ. ನಂತರ ಮರುದಿನ 7 ಗಂಟೆಗೆ ಗುರುವಾಯೂರು ಪ್ರಸಿದ್ಧ ಶ್ರೀ ಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ, ಅವರು ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಬೆಳಿಗ್ಗೆ 10 ಗಂಟೆಗೆ ಕೊಚ್ಚಿಗೆ ಮರಳಲಿದ್ದಾರೆ ಎಂದು ಹೇಳಲಾಗಿದೆ. ಲೋಕಸಭಾ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಲು ಪ್ರಧಾನಿ ಬಿಜೆಪಿ ನಾಯಕರನ್ನು ಭೇಟಿ ಮಾಡಲಿದ್ದು, ಅವರು ಕೇರಳದಲ್ಲಿ ಕೇಂದ್ರ ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ.