ಬೆಂಗಳೂರು : ವರ್ಷಾಂತ್ಯದಲ್ಲಿ ಡಿಸೆಂಬರ್ ತಿಂಗಳಲ್ಲಿ ನಮ್ಮ ಮೆಟ್ರೋಗೆ ಭರ್ಜರಿ ಆದಾಯ ಹರಿದು ಬಂದಿದ್ದು, ಪ್ರಯಾಣಿಕರ ಸಂಖ್ಯೆ ಕೂಡ ಹೆಚ್ಚಳವಾಗಿದೆ.
ಡಿಸೆಂಬರ್ ತಿಂಗಳಲ್ಲಿ ಬರೋಬ್ಬರಿ 2 ಕೋಟಿ ಪ್ರಯಾಣಿಕರು ಮೆಟ್ರೋದಲ್ಲಿ ಪ್ರಯಾಣಿಸಿದ್ದು, 55 ಕೋಟಿ ಆದಾಯ ಸಂಗ್ರಹವಾಗಿದೆ.
ಹೌದು, ಡಿಸೆಂಬರ್ ಒಂದೇ ತಿಂಗಳಲ್ಲಿ ಬರೋಬ್ಬರಿ 2 ಕೋಟಿ ಜನರು ಮೆಟ್ರೋ ಬಳಕೆ ಮಾಡಿದ್ದಾರೆ. ದಿನಕ್ಕೆ ಹೆಚ್ಚುಕಡಿಮೆ 6.88 ಲಕ್ಷ ಜನರು ಸಂಚಾರ ಮಾಡಿದ್ದಾರೆ. ಡಿಸೆಂಬರ್ ನಲ್ಲಿ 2,13,34,076 ಮಂದಿ ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ ಹಾಗೂ 55 ಕೋಟಿ ಆದಾಯ ಸಂಗ್ರಹವಾಗಿದೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.