alex Certify BREAKING : 4 ವರ್ಷದ ಕಂದಮ್ಮನ ಹತ್ಯೆ ಕೇಸ್ : ಮಗನನ್ನು ತಾನೇ ಕೊಂದಿದ್ದಾಗಿ ತಪ್ಪೊಪ್ಪಿಕೊಂಡ ತಾಯಿ ಸುಚನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : 4 ವರ್ಷದ ಕಂದಮ್ಮನ ಹತ್ಯೆ ಕೇಸ್ : ಮಗನನ್ನು ತಾನೇ ಕೊಂದಿದ್ದಾಗಿ ತಪ್ಪೊಪ್ಪಿಕೊಂಡ ತಾಯಿ ಸುಚನಾ

ಗೋವಾ : 4 ವರ್ಷದ ಕಂದಮ್ಮನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಮಗನನ್ನು ತಾನೇ ಕೊಂದಿದ್ದಾಗಿ ತಾಯಿ ಸುಚನಾ ತಪ್ಪೊಪ್ಪಿಕೊಂಡಿದ್ದಾಳೆ.

ಗೋವಾ ಪೊಲೀಸರ ವಿಚಾರಣೆಯ ವೇಳೆ ಮಗುವನ್ನು ತಾನೇ ಕೊಂದಿರುವುದಾಗಿ ಆಕೆ ತಪ್ಪೊಪ್ಪಿಕೊಂಡಿದ್ದಾಳೆ. ಭಾನುವಾರ ತಂದೆ ಮಗುವಿಗೆ ಪದೇ ಪದೇ ಕರೆ ಮಾಡುತ್ತಿದ್ದರು. ಅಲ್ಲದೆ ಮಗು ಜೊತೆ ಮಾತನಾಡುವುದಕ್ಕೆ ವಿಡಿಯೋ ಕಾಲ್ ಮಾಡುತ್ತಿದ್ದರು . ವಾರಕ್ಕೊಮ್ಮೆ ಪತಿ ವೆಂಕಟರಮಣನಿಗೆ ಮಗುವನ್ನ ವಿಡಿಯೋ ಕಾಲ್ ಮೂಲಕ ತೋರಿಸಬೇಕಿತ್ತು. ಆದರೆ ಹೆಂಡತಿಗೆ ಮಗುವನ್ನು ತೋರಿಸುವುದಕ್ಕೆ ಇಷ್ಟ ಇರಲಿಲ್ಲವಂತೆ. ತಂದೆ ಜೊತೆ ಮಗು ಮಾತನಾಡೋದು ನನಗೆ ಇಷ್ಟವಿರಲಿಲ್ಲ, ಆದ್ದರಿಂದ ನಾನು ಮಗುವಿನ ಪ್ರಜ್ಞೆ ತಪ್ಪಿಸಲು ದಿಂಬಿನಿಂದ ಒತ್ತಿ ಹಿಡಿದೆ, ಆದರೆ ಮಗು ಸಾವನ್ನಪ್ಪಿದೆ ಎಂದು ಹಂತಕಿ ಸುಚನಾ ಬಾಯ್ಬಿಟ್ಟಿದ್ದಾಳೆ.

ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಸುಚನಾಳನ್ನು ನಿನ್ನೆ 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಹೋಟೆಲ್ ನಲ್ಲಿ ತನ್ನ ಸ್ವಂತ ಮಗುವನ್ನೇ ಕೊಂದು ಸೂಟ್ ಕೇಸ್ ನಲ್ಲಿ ಶವ ತುಂಬಿ ರವಾನಿಸುತ್ತಿದ್ದ ಸ್ಟಾರ್ಟ್ ಅಪ್ ಫೌಂಡರ್ ಹಾಗೂ ಸಿಇಓ ಓರ್ವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಠಾಣೆ ಪೊಲೀಸರು ಬಂಧಿಸಿದ್ದರು. ಸ್ಟಾರ್ಟ್ ಅಪ್ ಫೌಂಡರ್ ಹಾಗೂ ಸಿಇಓ ಸುಚನಾ ಸೇಠ್ ಬಂಧಿತ ಆರೋಪಿಯಾಗಿದ್ದು, ಈಕೆ ಪುಟ್ಟ ಮಗನೊಂದಿಗೆ ಗೋವಾದ ಹೋಟೆಲ್ ಗೆ ಬಂದಿದ್ದು, ಈ ವೇಳೆ ಹೋಟೆಲ್ ರೂಮ್ ನಲ್ಲಿ ಮಗನ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಂತರ ಈಕೆ ಆತ್ಮಹತ್ಯೆಗೆ ಯತ್ನಿಸಿದ್ದಳು ಎನ್ನಲಾಗಿದೆ. ಕಾರಿನ ಡಿಕ್ಕಿಯಲ್ಲಿದ್ದ ಸೂಟ್ ಕೇಸ್ ತೆಗೆದು ಪರಿಶೀಲಿಸಿದಾಗ ಅದರಲ್ಲಿ ಮಗುವಿನ ಶವ ಪತ್ತೆಯಾಗಿದ್ದು, ಪೊಲೀಸರು ಶಾಕ್ ಆಗಿದ್ದರು.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...