
ಸಿಂದಗಿಯಿಂದ ಮೋರಟಗಿಗೆ ತೆರಳುತ್ತಿದ್ದ ಬೈಕ್ ಸವಾರನಿಗೆ ಎದುರಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್ ಗೆ ಬೆಂಕಿ ತಗುಲಿದೆ.ಕೂಡಲೇ ಜನರು ಪ್ರಾಣ ಉಳಿಸಿಕೊಳ್ಳಲು ಬಸ್ ನಿಂದ ಜಿಗಿದಿದ್ದಾರೆ. ಕೆಲವೇ ಕ್ಷಣಗಳಲ್ಲಿ ಇಡೀ ಬಸ್ ಸುಟ್ಟು ಕರಕಲಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಬಸ್ ಬೆಂಕಿಯಿಂದ ಸುಟ್ಟು ಕರಕಲಾಗಿತ್ತು, ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

