ಬೆಂಗಳೂರು : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ(KKRTC) ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಜನವರಿ 11ರಂದು ನಾಳೆ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಒಟ್ಟು 133 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು ಜನವರಿ 11, 2024 ರಂದು ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. . ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಯಚೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಖಾಲಿ ಹುದ್ದೆಗಳು
ಆಟೋ ಮೆಕಾನಿಕ್ 46
ಆಟೋ ಎಲೆಕ್ಟ್ರಿಷಿಯನ್ 28
ಆಟೋ ವೆಲ್ಡರ್ 20
ಆಟೋ ಮೆಷಿನಿಸ್ಟ್ 9
ಆಟೋ ಬಾಡಿ ಫಿಟ್ಟರ್ 20
ಆಟೋ ಪೇಂಟರ್ 10
ಅರ್ಹತೆ:
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಐಟಿಐ ಪೂರ್ಣಗೊಳಿಸಿರಬೇಕು.
ಸಂದರ್ಶನ ನಡೆಯುವ ಸ್ಥಳ
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
ವಿಭಾಗೀಯ ಕಚೇರಿ
ರಾಯಚೂರು ವಿಭಾಗ
ರಾಯಚೂರು
ಅಭ್ಯರ್ಥಿಗಳು ಸಂದರ್ಶನಕ್ಕೆ ಭಾಗಿಯಾಗುವ ಮುನ್ನ( https://www.apprenticeshipindia.gov.in/) ಆನ್ಲೈನ್ನಲ್ಲಿ ರಿಜಿಸ್ಟರ್ ಆಗಬೇಕು.