HomeEntertainment‘ಅಭಿನಯ ಚಕ್ರವರ್ತಿ’ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಮತ್ತೆ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಿಚ್ಚ ಸುದೀಪ್

‘ಅಭಿನಯ ಚಕ್ರವರ್ತಿ’ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಮತ್ತೆ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಿಚ್ಚ ಸುದೀಪ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ, ಸುದೀಪ್ ಅಭಿನಯದ ‘ಮ್ಯಾಕ್ಸ್’ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದೆ.

ಚಿತ್ರದಲ್ಲಿ ಸುದೀಪ್ ಅವರು ಅರ್ಜುನ್ ಮಹಾಕ್ಷಯ್ ಹೆಸರಿನ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ವಿಕ್ರಾಂತ್ ರೋಣ’ದಲ್ಲಿ ಇನ್ಸ್ ಪೆಕ್ಟರ್ ವಿಕ್ರಂತ್ ರೋಣ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಸುದೀಪ್, ‘ವರದನಾಯಕ’, ‘ವೀರ ಮದಕರಿ’, ‘ತಿರುಪತಿ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಖಡಕ್ ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಂಡಿದ್ದರು.

ವಿಜಯ ಕಾರ್ತಿಕೇಯ ನಿರ್ದೇಶನದ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದು, ವರಲಕ್ಷ್ಮಿ ಶರತ್ ಕುಮಾರ್, ಸಂಯುಕ್ತ ವರನಾಡು, ಸುಕೃತ ವಾಗ್ಲೆ ಮೊದಲಾದ ಕಲಾವಿದರು ನಟಿಸಿದ್ದಾರೆ. ಸಾಹಸ ನಿರ್ದೇಶಕ ಚೇತನ್ ಡಿಸೋಜ ಸಾಹಸ ಕಂಪೋಸ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular