ಬೆಂಗಳೂರು: ಜನವರಿ 22ರಂದು ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸದಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ನಾಯಕರಿಂದ ಶ್ರೀರಾಮ ಮಂದಿರದಲ್ಲಿ ಬಾಲರಾಮನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಬಹಿಷ್ಕಾರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ನವರು ಹೀಗೆ ಮಾಡುತ್ತಾರೆ ಎಂದು ಮೊದಲೇ ನಿರೀಕ್ಷೆ ಇತ್ತು. ಈ ನಿರ್ಣಯ ಬಿಜೆಪಿಗೆ ಆಶ್ಚರ್ಯ ತಂದಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ದೇಶದಲ್ಲಿ ಹಾಗೂ ರಾಜ್ಯದಲ್ಲಿ ರಾಮಭಕ್ತರಿಗೆ ತೊಂದರೆ ನೀಡಿದೆ. ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕರಿಸುವ ಮೂಲಕ ಕಾಂಗ್ರೆಸ್ ನ ಬಣ್ಣ ಬಯಲಾಗಿದೆ. ಜನವರಿ 22ರಂದು ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಬೇಕೆಂದು ಆದೇಶ ಮಾಡಿದರೆ ಅದನ್ನೂ ಕ್ಯಾನ್ಸಲ್ ಮಾಡ್ತಾರೆ ಎಂದು ಟೀಕಿಸಿದ್ದಾರೆ.