alex Certify ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ 4.5 ಕೋಟಿ ಫಲಾನುಭವಿಗಳಿಗೆ ʻಗ್ಯಾರಂಟಿ ಸ್ಮಾರ್ಟ್ ಕಾರ್ಡ್ʼ ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ 4.5 ಕೋಟಿ ಫಲಾನುಭವಿಗಳಿಗೆ ʻಗ್ಯಾರಂಟಿ ಸ್ಮಾರ್ಟ್ ಕಾರ್ಡ್ʼ ವಿತರಣೆ

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ 4.5 ಕೋಟಿ ಫಲಾನುಭವಿಗಳಿಗೆ ʻಗ್ಯಾರಂಟಿ ಸ್ಮಾರ್ಟ್ ಕಾರ್ಡ್ʼ ವಿತರಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ BJPಯವರೇ ಹೆಚ್ಚಿದ್ದಾರೆ. ನಾವು 59 ಸಾವಿರ ಕೋಟಿ ವಾರ್ಷಿಕ ವೆಚ್ಚ ಮಾಡಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ.ಇದು ದೇಶದಲ್ಲೇ ಮೊದಲು. ಪ್ರತಿಯೊಬ್ಬ ಕಾರ್ಯಕರ್ತನೂ ಎದೆ ಎತ್ತಿ, ತಲೆ ಎತ್ತಿ ಹೇಳಿ.ಪಕ್ಷದ ಕಾರ್ಯಕರ್ತರೇ ನಮ್ಮ ಬೆನ್ನೆಲುಬು. ನಿಮ್ಮ ಹೋರಾಟದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದರು.

ವಾಮ ಮಾರ್ಗದಲ್ಲಿ ಮೂರೂವರೆ ವರ್ಷ ಅಧಿಕಾರ ನಡೆಸಿದ ಬಿಜೆಪಿ ಮಾಡಬಾರದ್ದನ್ನೆಲ್ಲಾ ಮಾಡಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟು ಹೋಗಿತ್ತು.  ನೀರಾವರಿ ಇಲಾಖೆಯೊಂದರಲ್ಲೇ 13 ಸಾವಿರ ಕೋಟಿಗೂ ಅಧಿಕ ಬಿಲ್ ಬಾಕಿ ಉಳಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲಿ 9,000 ಕೋಟಿ,  ಸಣ್ಣನೀರಾವರಿ ಇಲಾಖೆಯಲ್ಲಿ  2,000 ಕೋಟಿ ರೂಪಾಯಿ, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 6,000 ಕೋಟಿ ರೂಪಾಯಿ, ಬೆಂಗಳೂರು ನಗರ 5,000 ಕೋಟಿ ಬಿಲ್ ಬಾಕಿ ಉಳಿಸಿದ್ದಾರೆ. ಹೀಗೆ ರಾಜ್ಯವನ್ನು ಹಾಳುಮಾಡಿ, ರಾಜ್ಯದ ಆರ್ಥಿಕತೆಯನ್ನು ಹಾಳುಗೆಡವಿ ಹೋಗಿದ್ದಾರೆ. ಇಷ್ಟಾದರೂ ನಾವು 59 ಸಾವಿರ ಕೋಟಿ ವಾರ್ಷಿಕ ವೆಚ್ಚ ಮಾಡಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ ಎಂದು ತಿಳಿಸಿದ್ದಾರೆ.

ಬಿಜೆಪಿಯವರು ಚೆನ್ನಾಗಿ ತಿಂದು, ಸಾವಿರಾರು ಕೋಟಿ ಕೆಲಸ ಶುರು ಮಾಡಿಸಿ ಸುಮಾರು 40 ಸಾವಿರ ಕೋಟಿಗೂ ಹೆಚ್ಚು ಬಿಲ್ ಕೊಡದೆ, ಬಿಲ್ ಬಾಕಿ ಉಳಿಸಿ ಮನೆಗೆ ಹೋಗಿದ್ದಾರೆ. ದುರಾಡಳಿತ ನಡೆಸಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟಿದ್ದಾರೆ.  ನಮ್ಮ ಗ್ಯಾರಂಟಿಗಳನ್ನು ಅಣಕಿಸಿ ಈಗ ನಮ್ಮ ಗ್ಯಾರಂಟಿಗಳನ್ನೇ ಕಾಪಿ ಮಾಡಿ ಅದಕ್ಕೆ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ಬಿಜೆಪಿಯವರು ಅಷ್ಟು ನಿರ್ಲಜ್ಜರಾಗಿದ್ದಾರೆ ಎಂದರು.

ಸರ್ಕಾರದ ಕೆಲಸಗಳನ್ನು ಪ್ರತಿ ಮನೆಗೆ ತಲುಪಿಸಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರ ಸುಳ್ಳನ್ನು ಸೋಲಿಸಿ ನಮ್ಮ ಸಾಧನೆಗಳನ್ನು ಎತ್ತಿ ಹಿಡಿಯುವ ಮೂಲಕ 28 ಲೋಕಸಭಾ ಸ್ಥಾನಗಳಲ್ಲಿ ಗೆಲ್ಲಿಸಿ ಎಂದು ಕಾರ್ಯಕರ್ತರಿಗೆ ಕೈಮುಗಿದು ಮನವಿ ಮಾಡುತ್ತೇನೆ. ದಯವಿಟ್ಟು ನಿಮ್ಮ ಹೃದಯದ ಮಾತು ಕೇಳಿ ಎಂದು ಕಾರ್ಯಕರ್ತರಿಗೆ ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...