ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮತ್ತೊಂದು ಕ್ರಮಕ್ಕೆ ಮುಂದಾಗಿದ್ದು, ಕೋವಿಡ್ ಸೋಂಕಿತರ ಸಂಪರ್ಕಿತರ ಪರೀಕ್ಷೆಗೂ ಮುಂದಾಗಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದ್ದು, ಕೊರೊನಾ ಸೋಂಕಿತರ ಜೊತೆ ಸಂಪರ್ಕದಲ್ಲಿದ್ದು, ರೋಗ ಲಕ್ಷಣ ಹೊಂದಿರುವವರು ಕಡ್ಡಾಯವಾಗಿ ಕೊರೊನಾ ಪರೀಕ್ಷೆ ನಡೆಸುವುದು ಹಾಗೂ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಆರೋಗ್ಯದ ಮೇಲೆ ತೀವ್ರ ನಿಗಾವಹಿಸುವ ಕುರಿತು ತೀರ್ಮಾನಿಸಲಾಗಿದೆ.
ನಿನ್ನೆ ಒಂದೇ ದಿನ ರಾಜ್ಯದಲ್ಲಿ 201 ಜನರಿಗೆ ಕೊರೋನಾ ಸೋಂಕು ತಗುಲಿದೆ. ಮೈಸೂರು ಜಿಲ್ಲೆಯಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. 7315 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 974 ಜನರಲ್ಲಿ ಕೊರೋನಾ ಸೋಂಕು ಸಕ್ರಿಯವಾಗಿದೆ. 257 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 2.74 ರಷ್ಟು ಇದೆ. ಬೆಂಗಳೂರಿನಲ್ಲಿ 121 ಜನರಿಗೆ ಪಾಸಿಟಿವ್ ವರದಿ ಬಂದಿದೆ.