![](https://kannadadunia.com/wp-content/uploads/2022/12/983211-central-govt-employees.jpg)
ಬೆಂಗಳೂರು : ಹಳೆ ಪಿಂಚಣಿ ಜಾರಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. 2006ರ ಪೂರ್ವದಲ್ಲಿ ನೇಮಕಾತಿಗೊಂಡು ಹೊಸ ಪಿಂಚಣಿ ಪದ್ದತಿ ಒಳಪಡುತ್ತಿರುವ ನೌಕರರನ್ನು ಹಳೆ ಪಿಂಚಿಣಿ ವ್ಯಾಪ್ತಿಗೆ ತರುವ ಬಗ್ಗೆ ರಾಜ್ಯ ಸರ್ಕಾರ ಭರವಸೆ ನೀಡಿದೆ.
ಹಳೆ ಪಿಂಚಣಿ ಜಾರಿ ಕುರಿತಂತೆ ಮುಖ್ಯಮಂತ್ರಿಗಳ ಒಪ್ಪಿಗೆ ಪಡೆದು ಶೀಘ್ರದಲ್ಲೇ ಆದೇಶ ಹೊರಡಿಸುವುದಾಗಿ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಭರವಸೆ ನೀಡಿದ್ದಾರೆ.
ರಾಜ್ಯ ಸರ್ಕಾರ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಹಾಗೂ ಕರ್ನಾಟಕ ಸಚಿವಾಲಯದ ನೌಕರರ ಸಂಘದ ಅಧ್ಯಕ್ಷ ರಮೇಶ್ ಸಂಗಾ ಹಾಗೂ ಪದಾಧಿಕಾರಿಗಳು ಎಲ್.ಕೆ.ಅತೀಕ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.