ಅಹಮದಾಬಾದ್: ಇಡೀ ದೇಶವೇ ಕಾತರದಿಂದ ಕಾಯುತ್ತಿರುವ ಐತಿಹಾಸಿಕ ಕ್ಷಣ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ದೇಶಾದ್ಯಂತ ಸಡಗರ-ಸಂಭ್ರಮ ಮನೆ ಮಾಡಿದೆ. ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗಲಿದೆ. ಆದರೆ ಕಾಂಗ್ರೆಸ್ ನಾಯಕರು ರಾಜಕೀಯ ಉದ್ದೇಶದಿಂದ ಈ ಕಾರ್ಯಕ್ರಮಕ್ಕೆ ಹೋಗದಿರಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ನಾಯಕರ ಈ ಧೋರಣೆಯನ್ನು ಇದೀಗ ಸ್ವಪಕ್ಷದವರೇ ಖಂಡಿಸಿದ್ದು, ಇಂತಹ ನಿರ್ಧಾರ ಮಾಡಬಾರುದು ಎಂದು ಸಲಹೆ ನೀಡಿದ್ದಾರೆ.
ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಹಲವು ಕಾಂಗ್ರೆಸ್ ನಾಯಕರು ಕಾರ್ಯಕ್ರಮಕ್ಕೆ ಹೋಗದಿರಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗುಜರಾತ್ ಕಾಂಗ್ರೆಸ್ ಉಸ್ತುವಾರಿಯೂ ಆಗಿರುವ ಶಾಸಕ ಅರ್ಜುನ್ ಮೊಧ್ವಾಡಿಯಾ, ಶ್ರೀರಾಮ ಎಲ್ಲರ ಆರಾಧ್ಯ ದೈವ, ಕಾಂಗ್ರೆಸ್ ನಾಯಕರು ರಾಜಕೀಯಕ್ಕಾಗಿ ರಾಮ ಮಂದಿರ ಉದ್ಘಾಟನೆಗೆ ಹೋಗಬಾರದೆಂಬ ನಿರ್ಧಾರ ಮಾಡಬಾರದು ಎಂದು ಹೇಳಿದ್ದಾರೆ.
ರಾಮ ಮಂದಿರ ಉದ್ಘಾಟನೆ ವಿಚಾರವಾಗಿ ಕಾಂಗ್ರೆಸ್ ತೆಗೆದುಕೊಂಡಿರುವ ನಿಲುವನ್ನು ಒಪ್ಪದ ಶಾಸಕ ಅರ್ಜುನ್ ಮೊಧ್ವಾಡಿಯಾ, ಇಂತಹ ನಿರ್ಧಾರವನ್ನು ಕಾಂಗ್ರೆಸ್ ಎಂದೂ ತೆಗೆದುಕೊಳ್ಳಬಾರದು ಎಂದು ಸಲಹೆ ನೀಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಿಂದ ಅಂತರ ಕಾದುಕೊಳ್ಳುವುದಾಗಿ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಸುದ್ದು ಚರ್ಚೆಯಲ್ಲಿದೆ. ಈ ನಡುವೆ ಕಾಂಗ್ರೆಸ್ ಶಾಸಕ ಅರ್ಜುನ್ ಮೊಧ್ವಾಡಿಯಾ ಇಂತಹ ರಾಜಕೀಯ ನಿರ್ಧಾರಗಳಿಂದ ದೂರವಿರಿ ಎಂದು ಕೈ ನಾಯಕರಿಗೆ ಸಲಹೆ ನೀಡಿದ್ದಾರೆ.