HomeKarnatakaಭದ್ರಾ ಎಡದಂಡೆ-ಬಲದಂಡೆ ನಾಲೆಗಳಿಗೆ ನೀರು ಹರಿಸುವ ದಿನಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಭದ್ರಾ ಎಡದಂಡೆ-ಬಲದಂಡೆ ನಾಲೆಗಳಿಗೆ ನೀರು ಹರಿಸುವ ದಿನಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಶಿವಮೊಗ್ಗ: 2023-24 ನೇ ಸಾಲಿನ ಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಭತ್ತ, ಕಬ್ಬು, ಅರೆ ನೀರಾವರಿ ಬೆಳೆ ಮುಂತಾದ ಯಾವುದೇ ರೀತಿಯ ಬೆಳೆಗಳಿಗೆ ನೀರನ್ನು ಹರಿಸದಿರಲು ಹಾಗೂ ಬೆಳೆದು ನಿಂತಿರುವ ಬೆಳೆ, ಜನ-ಜಾನುವಾರು, ಕುಡಿಯುವ ನೀರು ಮತ್ತು ಪರಿಸರ ಸಮತೋಲನ ಕಾಪಾಡಿಕೊಳ್ಳಲು ಆನ್ ಅಂಡ್ ಆಫ್ ಪದ್ದತಿಯಲ್ಲಿ ಬಲದಂಡೆ ನಾಲೆಗೆ ಜ. 15 -ರಿಂದ ಒಟ್ಟು 53 ದಿನಗಳಿಗೆ ಹಾಗೂ ಎಡದಂಡೆ ನಾಲೆಗೆ ಜ. 10 ರಿಂದ ಒಟ್ಟು 70 ದಿನಗಳಿಗೆ ನೀರು ಹರಿಸಲು ತೀರ್ಮಾನಿಸಲಾಗಿದೆ.

ಎಡದಂಡೆ ನಾಲೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭದ್ರಾ ಎಡದಂಡೆ ನಾಲೆಯಲ್ಲಿ ಜ.10 ರಿಂದ 25 ರವರೆಗೆ 16 ದಿನ ನೀರು ಹರಿಸುವುದು. ಜ.26 ರಿಂದ ಫೆ.9 ರವರೆಗೆ 15 ದಿನ ನೀರು ನಿಲ್ಲಿಸುವುದು. ಫೆ.10 ರಿಂದ 26 ರವರೆಗೆ 17 ದಿನ ನೀರು ಹರಿಸುವುದು, ಫೆ.27 ರಿಂದ ಮಾ.12 ರವರೆಗೆ 15 ದಿನ ನೀರು ನಿಲ್ಲಿಸುವುದು. ಮಾ.3 ರಿಂದ 30 ರವರೆಗೆ 18 ನೀರು ಹರಿಸುವುದು ಮಾ.31 ರಿಂದ ಏ.14 ರವರೆಗೆ 15 ದಿನ ನೀರು ನಿಲ್ಲಿಸುವುದು. ಏ.15 ರಿಂದ ಮೇ.3 ರವರೆಗೆ 19 ದಿನಗಳ ನೀರು ಹರಿಸಲಾಗುವುದು.

ಬಲದಂಡೆ ನಾಲೆ

ಭದ್ರಾ ಬಲದಂಡೆ ನಾಲೆಯಲ್ಲಿ ಜ.15 ರಿಂದ 26 ರವರೆಗೆ 12 ದಿನ ನೀರು ಹರಿಸುವುದು, ಜ.27 ರಿಂದ ಫೆ.15 ರವರೆಗೆ 20 ದಿನ ನೀರು ನಿಲ್ಲಿಸುವುದು. ಫೆ.16 ರಿಂದ 28 ರವರೆಗೆ 13 ದಿನ ನೀರು ಹರಿಸುವುದು, ಫೆ.29 ರಿಂದ ಮಾ.19 ರವರೆಗೆ 20 ದಿನ ನೀರು ನಿಲ್ಲಿಸುವುದು. ಮಾ.20 ರಿಂದ ಏ.2 ರವರೆಗೆ 14 ದಿನ ನೀರು ಹರಿಸುವುದು, ಏ.3 ರಿಂದ 22 ರವರೆಗೆ 20 ದಿನಗಳಿಗೆ ನೀರು ನಿಲ್ಲಿಸುವುದು. ಏ.23 ರಿಂದ ಮೇ 5 ರವರೆಗೆ 14 ದಿನಗಳ ನೀರು ಹರಿಸಲಾಗುವುದು ಎಂದು ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular