
ಬೆಂಗಳೂರು: ನಿಗಮ -ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ತಮ್ಮನ್ನು ಪರಿಗಣಿಸದಂತೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ನಿಗಮ -ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ಆರಂಭವಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಪರಿಗಣಿಸದಂತೆ ಮನವಿ ಮಾಡುತ್ತೇನೆ. ಪಕ್ಷ, ವರಿಷ್ಠರು, ಮತದಾರರಿಗೆ ಮುಜುಗರವಾಗದ ರೀತಿಯಲ್ಲಿ ನಡೆದುಕೊಳ್ಳುತ್ತೇನೆ. ಚಳ್ಳೆಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆಗೆ ಪಕ್ಷ ನನಗೆ ಅವಕಾಶ ನೀಡಿದೆ. 2013, 2018, 2023ರಲ್ಲಿ ನಡೆದ ಚುನಾವಣೆಯಲ್ಲಿ ಮತದಾರರು ಆಶೀರ್ವದಿಸಿದ್ದು, ಇಂತಹ ಅವಕಾಶಕ್ಕಾಗಿ ಪಕ್ಷ ಮತ್ತು ವರಿಷ್ಠರಿಗೆ ಋಣಿಯಾಗಿರುತ್ತೇನೆ ಎಂದು ತಿಳಿಸಿದ್ದಾರೆ.
ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಹಕಾರ ನಿರೀಕ್ಷಿಸುತ್ತಿದ್ದೇನೆ. ನನ್ನನ್ನು ನಿಗಮ -ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಬೇಡಿ ಎಂದು ಕೋರಿದ್ದಾರೆ.