HomeKarnatakaಅನ್ನಭಾಗ್ಯ, ಗೃಹಲಕ್ಷ್ಮಿ ಸೇರಿ ʻಗ್ಯಾರಂಟಿʼ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಅನ್ನಭಾಗ್ಯ, ಗೃಹಲಕ್ಷ್ಮಿ ಸೇರಿ ʻಗ್ಯಾರಂಟಿʼ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು : ಜನಪರ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳು ಎಲ್ಲ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದ್ದು, ಎಲ್ಲ ಐದೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಮೇಲುಸ್ತುವಾರಿಗೆ ರಾಜ್ಯ, ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಸಮಿತಿಗಳನ್ನು ರಚಿಸಲು ತೀರ್ಮಾನಿಸಲಾಗಿದೆ.

ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು ಎಂದು ಹೇಳಿದ್ದಾರೆ.

ಸುಮಾರು 31 ಜನ ಸದಸ್ಯರು ಇರಲಿದ್ದು ಇವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವಧನ  ನೀಡುವ ವ್ಯವಸ್ಥೆ ಆಗಲಿದೆ ಹಾಗೂ 50 ಸಾವಿರ ರೂ.ಗಳನ್ನು ಪ್ರತಿ ತಿಂಗಳು ನೀಡಲಾಗುವುದು. 21 ಸದಸ್ಯರು ಇರಲಿದ್ದು, 224 ಕ್ಷೇತ್ರಗಳಲ್ಲಿ ಅಧ್ಯಕ್ಷರು ಹಾಗೂ 11 ಸದಸ್ಯರು ಇರಲಿದ್ದಾರೆ. ಇವರಿಗೆ ಗೌರವ ಧನ ಹಾಗೂ ಸಿಟ್ಟಿಂಗ್ ಫೀಸ್ ಸಹ  ಒದಗಿಸಲಾಗುವುದು. ಈ ಮೊತ್ತವನ್ನು ರಾಜ್ಯ ಖಜಾನೆಯಿಂದ ಭರಿಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರಕ್ಕೆ ಇದು ದೊಡ್ಡ ಹೊರೆಯೇನಲ್ಲ. ಪರಿಣಾಮಕಾರಿಯಾಗಿ ಗ್ಯಾರಂಟಿಗಳ ಅನುಷ್ಠಾನವಾಗಬೇಕು ಎಂಬ ಕಾರಣಕ್ಕೆ 16 ಕೋಟಿ ರೂ.ಗಳನ್ನು ಭರಿಸುತ್ತೇವೆ. ಅಪಪ್ರಚಾರಕ್ಕೆ ಉತ್ತರ ಕೊಡಲು ಈ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular