![](https://kannadadunia.com/wp-content/uploads/2022/10/breaking-news-poster-design-template-d020bd02f944a333be71e17e3a38db24_screen-1.jpg)
ಹೊಸಪೇಟೆ : ಹೊಸಪೇಟೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದು, ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಿದ್ದು, 10 ಆರೋಪಿಗಳನ್ನು ಬಂಧಿಸಿದೆ.
ಹೊಸಪೇಟೆಯ ರಾಣಿಪೇಟೆಯ ವೆಂಕಟೇಶ್ವರ ಲಾಡ್ಜ್ ಮೇಲೆ ದಾಳಿ ನಡೆಸಿರುವ ಪೊಲೀಸರು ವೇಶ್ಯವಾಟಿಕೆ ನಡೆಸುತ್ತಿದ್ದ ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಪ್ರಕರಣದಲ್ಲಿ ಈವರೆಗೆ 10 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಜಯನಗರ ಹಾಗೂ ಕೊಲ್ಕತ್ತಾ ಮೂಲದ 10 ಮಂದಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಜಯನಗರ ಹಾಗೂ ಕೊಲ್ಕತ್ತಾದ ತಲಾ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಸದ್ಯ ಹೊಸಪೇಟೆ ಟೌನ್ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.