ಬೆಂಗಳೂರು: ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಕೆರೆಗಳಲ್ಲಿ ಅವೈಜ್ಞಾನಿಕವಾಗಿ ಹೂಳು ತೆಗೆದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳಿಗೆ ಸಣ್ಣ ನೀರಾವರಿ ಸಚಿವ ಎನ್.ಎ.ಸ್ ಬೋಸರಾಜು ಸೂಚನೆ ನೀಡಿದ್ದಾರೆ.
ಅಸಮರ್ಪಕ ಮತ್ತು ಅವೈಜ್ಞಾನಿಕವಾಗಿ ಹೂಳು ತೆಗೆಯುತ್ತಿರುವುದರಿಂದ ಕೆರೆಗಳಲ್ಲಿ ನೀರು ಇಂಗಿ ನೀರಿನ ಅಭಾವ ಉಂಟಾಗುತ್ತದೆ. ಅಂತರ್ಜಲ ಮಟ್ಟ ಕೂಡ ಹೆಚ್ಚಿನ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ. ಹೀಗಾಗಿ ಅವೈಜ್ಞಾನಿಕವಾಗಿ ಹೂಳು ತೆಗೆದರೆ ಕ್ರಮ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.
ನಿರ್ದಿಷ್ಟ ಮಿತಿಗಿಂತ ಹೆಚ್ಚು ಹೂಳು ತೆಗೆಯುತ್ತಿರುವುದು ಕಂಡು ಬಂದಿದ್ದು, ಇಂತಹ ಚಟುವಟಿಕೆ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು. ಎಲ್ಲಾ ವೃತ್ತಗಳ ಕಾರ್ಯಪಾಲಕ ಇಂಜಿನಿಯರ್ ಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದಾರೆ.