HomeKarnatakaBIG NEWS: ನಿಷೇಧಾಜ್ಞೆ ನಿಯಮ ಉಲ್ಲಂಘನೆ; ಬಿಜೆಪಿ 17 ಕಾರ್ಯಕರ್ತರಿಗೆ ಸಮನ್ಸ್ ಜಾರಿ

BIG NEWS: ನಿಷೇಧಾಜ್ಞೆ ನಿಯಮ ಉಲ್ಲಂಘನೆ; ಬಿಜೆಪಿ 17 ಕಾರ್ಯಕರ್ತರಿಗೆ ಸಮನ್ಸ್ ಜಾರಿ

ಮಂಡ್ಯ: 2017ರಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಬೈಕ್ ರ್ಯಾಲಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಬಿಜೆಪಿ ಕಾರ್ಯಕರ್ತರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಪಾಂಡವಪುರ ಜೆ ಎಂ ಎಫ್ ಸಿ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಬಿಜೆಪಿ ಕಾರ್ಯಕರ್ತರು ಅಂದು ನಿಷೇಧಾಜ್ಞೆ ಇದ್ದರೂ ಎಸ್ ಡಿ ಪಿಐ, ಪಿಎಫ್ ಐ ಸಂಘಟನೆಗಳ ವಿರುದ್ಧ ಪ್ರತಿಭಟನೆಗೆ ಮಂಗಳೂರಿಗೆ ಹೊರಟಿದ್ದರು. ಪಾಂಡವಪುರದಲ್ಲಿ ಪ್ರತಿಭಟನಾಕಾರರನ್ನು ತಡೆದಿದ್ದ ಪೊಲೀಸರು ಎಫ್ ಐ ಆರ್ ದಾಖಲಿಸಿ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಕೋರ್ಟ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಇದೀಗ ಸಮನ್ಸ್ ಜಾರಿ ಮಾಡಲಾಗಿದೆ. ಕಾರ್ಯಕರ್ತರಿಗೆ ಸಮನ್ಸ್ ಜಾರಿ ಬೆನ್ನಲ್ಲೇ ಪೊಲೀಸರ ವಿರುದ್ಧ ಬಿಜೆಪಿ ಕಿಡಿಕಾರಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular