ಬೆಂಗಳೂರು : ಪಬ್ ನಲ್ಲಿ ನಿಯಮ ಮೀರಿ ಪಾರ್ಟಿ ಮಾಡಿದ ಆರೋಪದ ಹಿನ್ನೆಲೆ ನಟ ದರ್ಶನ್ ಸೇರಿ 8 ಮಂದಿಗೆ ನೋಟಿಸ್ ನೀಡಲಾಗಿದ್ದು, ಇಂದು ನಟ ದರ್ಶನ್ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.
ನಟ ದರ್ಶನ್ ವಿದೇಶದಿಂದ ವಾಪಸ್ ಆಗಿದ್ದು, ಇಂದು ನಗರದ ಸುಬ್ರಹ್ಮಣ್ಯ ಠಾಣೆಗೆ ಬಂದು ಹೇಳಿಕೆ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ನಟ ದರ್ಶನ್, ಡಾಲಿ ಧನಂಜ, ಯ್, ಚಿಕ್ಕಣ್ಣ, ರಾಕ್ ಲೈನ್ ವೆಂಕಟೇಶ್, ಅಭಿಷೇಕ್ ಅಂಬರೀಷ್, ನಿನಾಸಂ ಸತೀಶ್ ಸಂಗೀತ ನಿರ್ದೇಶಕ ಹರಿಕೃಷ್ಣ, ನಿರ್ದೇಶಕ ತರುಣ್ ಸುಧೀರ್ ಸೇರಿ 8 ಮಂದಿಗೆ ನೋಟಿಸ್ ನೀಡಲಾಗಿದೆ. ನೋಟಿಸ್ ತಲುಪಿದ ಕೂಡಲೇ ವಿಚಾರಣೆಗೆ ಹಾಜರಾಗುವಂತೆ ಸುಬ್ರಮಣ್ಯನಗರ ಪೊಲೀಸರು ನೋಟಿಸ್ ನೀಡಿದ್ದರು.
ಸಿನಿಮಾದ ಸಕ್ಸಸ್ ಹಿನ್ನೆಲೆ ಚಿತ್ರತಂಡ ಬೆಂಗಳೂರಿನ ರಾಜಾಜಿನಗರದ ಒರಾಯನ್ ಮಾಲ್ ಬಳಿ ಇರುವ ಜೆಟ್ ಲ್ಯಾಗ್ ಪಬ್ನಲ್ಲಿ ಪಾರ್ಟಿ ಆಯೋಜಿಸಿತ್ತು.ಹೊಟೇಲ್, ಬಾರ್ ಅಂಡ್ ರೆಸ್ಟೋರೆಂಟ್ ಗೆ ಅನ್ವಯವಾಗುವ ನಿಯಮ ಪ್ರಕಾರ ಮಧ್ಯರಾತ್ರಿ 1 ಗಂಟೆಗೆ ಪಬ್ ಮುಚ್ಚಬೇಕು. ಒಂದು ಗಂಟೆ ಆಗುತ್ತಿದ್ದಂತೆ ಪಾರ್ಟಿ ಪೂರ್ಣಗೊಳಿಸಬೇಕಿತ್ತು, ಅವಧಿ ಮೀರಿ ಪಾರ್ಟಿ ನಡೆಸಿದ ಹಿನ್ನೆಲೆ ಪೊಲೀಸರು ಪಬ್ ಮಾಲೀಕರ ವಿರುದ್ಧ ಎಫ್ ಐ ಆರ್ ದಾಖಲಿಸಿ ನಟರಿಗೂ ನೋಟಿಸ್ ನೀಡಿದ್ದರು.