ನವದೆಹಲಿ: ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಅಧಿಕಾರ ಹೊಂದಿರುವ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಅವರನ್ನು ಕೈಬಿಡುವ ಹೊಸದಾಗಿ ಅಂಗೀಕರಿಸಲಾದ ಕಾಯ್ದೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಆದಾಗ್ಯೂ, ಏಪ್ರಿಲ್ ಒಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ನೋಟಿಸ್ ನೀಡಿದೆ. ಹೊಸ ಕಾನೂನನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಆದೇಶ ಹೊರಡಿಸಿದೆ.
ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರ (ಸಿಇಸಿ ಮತ್ತು ಇಸಿ) ನೇಮಕಾತಿಗಾಗಿ ತಟಸ್ಥ ಮತ್ತು ಸ್ವತಂತ್ರ ಆಯ್ಕೆ ಸಮಿತಿಯನ್ನು ರಚಿಸುವ ಸ್ವತಂತ್ರ ಮತ್ತು ಪಾರದರ್ಶಕ ಆಯ್ಕೆ ವ್ಯವಸ್ಥೆಯನ್ನು ಜಾರಿಗೆ ತರಲು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಬೇಕು ಎಂದು ವಕೀಲ ಗೋಪಾಲ್ ಸಿಂಗ್ ಅವರು ಅರ್ಜಿಯಲ್ಲಿ ಕೋರಿದ್ದಾರೆ.