ಮಹಾರಾಷ್ಟ್ರದಲ್ಲಿ ಪ್ರಧಾನಿ ಮೋದಿ ಹವಾ ಜೋರಾಗಿದ್ದು, ಮೆಗಾ ರೋಡ್ ಶೋ ನಡೆಸುತ್ತಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸುತ್ತಿದ್ದಾರೆ.
ಮುಂಬೈನಲ್ಲಿ ಇಂದು ಮಧ್ಯಾಹ್ನ 3.30 ಕ್ಕೆ ಅಟಲ್ ಸೇತು ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಉದ್ಘಾಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನಾಸಿಕ್ ನಲ್ಲಿ ರೋಡ್ ಶೋ ನಡೆಸುತ್ತಿದ್ದಾರೆ. ನಂತರ ಅವರು ನಗರದ ಶ್ರೀ ಕಲಾರಾಮ್ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ ಮತ್ತು ಮಹಾನ್ ತತ್ವಜ್ಞಾನಿ ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಯುವ ಉತ್ಸವದಲ್ಲಿ ಭಾಗವಹಿಸಲಿದ್ದಾರೆ.
ಭಾರತದ ಅತಿ ಉದ್ದದ ಸಮುದ್ರ ಸೇತುವೆಯಾದ ಅಟಲ್ ಸೇತುವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಲಿದ್ದಾರೆ. ಈ ಸೇತುವೆಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನು ಇಡಲಾಗಿದೆ. 21.8 ಕಿ.ಮೀ ಉದ್ದದ ಆರು ಪಥದ ಸೇತುವೆಯನ್ನು 18,000 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಅವರೊಂದಿಗೆ ನಾಸಿಕ್ ನಲ್ಲಿ ರೋಡ್ ಶೋ ನಡೆಸಿದರು
500 ಬೋಯಿಂಗ್ ವಿಮಾನಗಳ ತೂಕಕ್ಕೆ ಸಮನಾದ 177,903 ಮೆಟ್ರಿಕ್ ಟನ್ ಉಕ್ಕು ಮತ್ತು ಐಫೆಲ್ ಟವರ್ ನ ತೂಕಕ್ಕಿಂತ 17 ಪಟ್ಟು ಹೆಚ್ಚು ಉಕ್ಕನ್ನು ಇದರ ನಿರ್ಮಾಣಕ್ಕೆ ಬಳಸಲಾಯಿತು.