![](https://kannadadunia.com/wp-content/uploads/2023/12/Pm-modi-4.png)
ಶಿವಮೊಗ್ಗ : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದು, ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಕಾರ್ಯಕ್ರಮ ನಡೆಯುತ್ತಿದೆ.
ಶಿವಮೊಗ್ಗದಲ್ಲಿ ಇಂದು ನಡೆಯುವ ಯುವನಿಧಿ ಚಾಲನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೆಲ ವಿದ್ಯಾರ್ಥಿಗಳು ಪ್ರಧಾನಿ ಮೋದಿ ಪರ ಘೋಷಣೆ ಕೂಗಿರುವ ಘಟನೆ ನಡೆದಿದೆ. ಕಾರ್ಯಕ್ರಮ ನಡೆಯುವ ಫ್ರೀಡಂಪಾರ್ಕ್ ಸಮೀಪ ಕೆಲ ವಿದ್ಯಾರ್ಥಿಗಳು ಜೈಶ್ರೀರಾಮ್ ಘೋಷಣೆ ಕೂಗುತ್ತ ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಗೆ ಜೈಕಾರ ಕೂಗಿದ್ದಾರೆ. ವೋಟ್ ಫಾರ್ ಮೋದಿ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ , ರಾಜ್ಯದ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯ ನೊಂದಣಿ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಇಂದು ಯೋಜನೆಗೆ ಶಿವಮೊಗ್ಗ ನಗರದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಯೋಜನೆಗೆ ನೊಂದಣಿಯಾಗಿರುವ ಎಲ್ಲ ಅಭ್ಯರ್ಥಿಗಳ ಖಾತೆಗೆ ಇಂದು ದಿನ ಮೊದಲ ತಿಂಗಳ ಹಣ ಜಮೆ ಆಗಲಿದೆ.