HomeKarnatakaBIG NEWS : ‘ಯುವನಿಧಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ರಾಜ್ಯಾದ್ಯಂತ ಇದುವರೆಗೆ 67,951...

BIG NEWS : ‘ಯುವನಿಧಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ರಾಜ್ಯಾದ್ಯಂತ ಇದುವರೆಗೆ 67,951 ಅರ್ಜಿ ಸಲ್ಲಿಕೆ

ಬೆಂಗಳೂರು : ರಾಜ್ಯದಲ್ಲಿ ‘ಯುವನಿಧಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಇದುವರೆಗೆ 67,951 ಅರ್ಜಿ ಸಲ್ಲಿಕೆಯಾಗಿದೆ ಎಂದು ತಿಳಿದು ಬಂದಿದೆ.

ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯೋಜನೆ ‘ಯುವನಿಧಿ’ಗೆ ರಾಜ್ಯಾದ್ಯಂತ ಈಗಾಗಲೇ 67,951 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಅತಿಹೆಚ್ಚು 7,453 ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರದ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ 2023ರ ಎಲ್ಲ ಪದವೀಧರರಿಗೆ ಹಾಗೂ ಡಿಪ್ಲೋಮಾ ಪದವೀಧರರಿಗೆ ತಲುಪಿಸಿ. ಉತ್ತಮ ನಾಳೆಗಳನ್ನು ಕಟ್ಟಿಕೊಳ್ಳಲು ಯುವಜನತೆಗೆ ನೆರವಾಗಿ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ಯುವನಿಧಿ ಯೋಜನೆಗೆ ಸಿಎಂ ಸಿಎಂ ಸಿದ್ದರಾಮಯ್ಯ ಇಂದು ಶಿವಮೊಗ್ಗದಲ್ಲಿ ಚಾಲನೆ ನೀಡಿದ್ದಾರೆ.
ಈ ಯೋಜನೆಯಡಿ ಪದವಿ ಪಾಸಾದವರಿಗೆ ರೂ.3000 ಮತ್ತು ಡಿಪ್ಲೋಮಾ ಪಾಸಾದವರಿಗೆ ರೂ.1500ಗಳನ್ನು ನೀಡಲಾಗುತ್ತದೆ. ಅರ್ಹರು ಸೇವಾ ಸಿಂಧು ಪೋರ್ಟಲ್, ಅಟಲ್ ಜೀ ಕೇಂದ್ರ, ಕರ್ನಾಟಕ-1 ಮತ್ತು ಇತರೆ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಸಿಕೊಳ್ಳಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular