ಬೆಂಗಳೂರು : ರಾಜ್ಯದಲ್ಲಿ ಒಟ್ಟು 73 ಯೋಜನಾ ಪ್ರಸ್ತಾವನೆಗಳಿಗೆ ಶುಕ್ರವಾರ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ಈ ಮೂಲಕ 14,497 ಉದ್ಯೋಗಾವಕಾಶ ಸೃಷ್ಟಿಯಾಗಲಿವೆ ಎಂದು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ಸಭೆಯಲ್ಲಿ ಮಾತನಾಡಿದ ಸಚಿವರು ರಾಜ್ಯದಲ್ಲಿ ₹3,935 ಕೋಟಿಗೂ ಹೆಚ್ಚಿನ ಹೂಡಿಕೆಯಾಗಲಿರುವ ಒಟ್ಟು73 ಯೋಜನಾ ಪ್ರಸ್ತಾವನೆಗಳಿಗೆ ಶುಕ್ರವಾರ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದರು. ವಿವಿಧ ಕಂಪನಿಗಳು ಗೌರಿಬಿದನೂರು ಮತ್ತು ತುಮಕೂರಿನ ವಸಂತ ನರಸಾಪುರಗಳಲ್ಲಿ ದೇವನಹಳ್ಳಿ, ಸಿರಾ ಕೈಗಾರಿಕಾ ಪ್ರದೇಶ, ಹೂವಿನಹಡಗಲಿ, ರಾಮನಗರ, ಕಡೇಚೂರು, ಚಾಮರಾಜನಗರದಲ್ಲಿ ಹೂಡಿಕೆ ಮಾಡಲಿದ್ದು, ಒಟ್ಟು 9,200 ಉದ್ಯೋಗಗಳನ್ನು ಸೃಷ್ಟಿಸಲಿವೆ. 490.50 ಕೋಟಿ ರೂ.ವರೆಗೂ ಬಂಡವಾಳ ಹೂಡಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕನಿಷ್ಠ 15 ಕೋಟಿ ರೂ.ಗಳಿಂದ ಹಿಡಿದು ಗರಿಷ್ಠ 50 ಕೋಟಿ ರೂ.ವರೆಗೂ ಹೂಡಿಕೆ ಮಾಡುವ ಪ್ರಸ್ತಾವನೆ ಸಲ್ಲಿಸಿದ್ದ 59 ಹೊಸ ಯೋಜನೆಗಳಿಗೂ ಒಪ್ಪಿಗೆ ನೀಡಲಾಗಿದೆ. ಇದರಿಂದ 5,297 ಮಂದಿಗೆ ಉದ್ಯೋಗ ಸಿಗಲಿದೆ. ರಾಜ್ಯಕ್ಕೆ 87.67 ಕೋಟಿ ರೂ. ಬಂಡವಾಳ ಹರಿದು ಬರಲಿದೆ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.