ಕೆಮಿಸ್ಟ್ರಿ ಲ್ಯಾಬ್ ನಲ್ಲಿ ಅನಿಲ ಸೋರಿಕೆಯಿಂದಾಗಿ ಬಿಹಾರದ ಮುಂಗೇರ್ ಜಿಲ್ಲೆಯ ಶಾಲೆಯೊಂದರಲ್ಲಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಜ್ಞಾಹೀನರಾಗಿದ್ದಾರೆ.
ಮುಂಗೇರ್ ನಗರದ ನೊಟ್ರೆ-ಡೇಮ್ ಅಕಾಡೆಮಿಯಲ್ಲಿ ಈ ಘಟನೆ ನಡೆದಿದೆ. ಆ್ಯಂಬುಲೆನ್ಸ್‌ಗಳನ್ನು ಶಾಲೆಗೆ ಕಳುಹಿಸಿ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗ್ಯಾಸ್ ನ ಘಾಟು ವಾಸನೆ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ. ಅವರು ಪ್ರಜ್ಞಾಹೀನರಾಗಿ ನೆಲದ ಮೇಲೆ ಬಿದ್ದರು ಎಂದು ಮುಂಗೇರ್‌ನ ಸದರ್ ಆಸ್ಪತ್ರೆಯ ಉಪ ಅಧೀಕ್ಷಕ ಡಾ.ರಾಮನ್ ಕುಮಾರ್ ಹೇಳಿದ್ದಾರೆ.
ಮಾಹಿತಿ ಪಡೆದ ಪೊಲೀಸರ ತಂಡ ಶಾಲೆಗೆ ತೆರಳಿ ವಿದ್ಯಾರ್ಥಿಗಳನ್ನು ಸದರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಸಿರಾಟದ ತೊಂದರೆಯಿಂದ ಒಟ್ಟು 18 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲೆಯಲ್ಲಿ ಹೆಚ್ಚಿನ ಪ್ರಮಾಣದ ಕೀಟನಾಶಕಗಳನ್ನು ಬಳಸಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಶಾಲಾ ಅಧಿಕಾರಿಗಳು ತಿಳಿಸಿದ್ದಾರೆ.
ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ. ಭಯಪಡುವ ಅಗತ್ಯವಿಲ್ಲ ಎಂದು ಮುಂಗೇರ್ ಶಾಸಕ ಪ್ರಣವ್ ಕುಮಾರ್ ಹೇಳಿದರು.