HomeKarnatakaಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಶೀಘ್ರವೇ 14 ಸಾವಿರಕ್ಕೂ ಹೆಚ್ಚು ಉದ್ಯೋಗಗಳ ಸೃಷ್ಟಿ

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಶೀಘ್ರವೇ 14 ಸಾವಿರಕ್ಕೂ ಹೆಚ್ಚು ಉದ್ಯೋಗಗಳ ಸೃಷ್ಟಿ

ಬೆಂಗಳೂರು : ರಾಜ್ಯದಲ್ಲಿ ನೂತನ ಉದ್ಯಮಗಳ ಸ್ಥಾಪನೆಯಾಗಲಿದೆ,ಉದ್ಯೋಗ ಸೃಷ್ಟಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹೇಳಿದರು.

ಶುಕ್ರವಾರ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆ ನಡೆಸಿದ್ದು, ಸಭೆ ಬಳಿಕ ಮಾತನಾಡಿದ ಸಚಿವರು ರಾಜ್ಯದಲ್ಲಿ 3,935 ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆಯಾಗಲಿದ್ದು, 14,500+ ಉದ್ಯೋಗಳ ಸೃಷ್ಟಿಯಾಗಲಿದೆ ಎಂದರು.

73 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು ₹ 3,935 ಕೋಟಿ ಬಂಡವಾಳ ಹೂಡಿಕೆಯಾಗಲಿದೆ. ಸುಮಾರು 14,500 ಉದ್ಯೋಗಗಳು ಸೃಷ್ಟಿಯಾಗಲಿದೆ.ETL ಸೆಕ್ಯೂರ್ ಸ್ಪೇಸ್ ಲಿ., DhaSH ಪಿ.ವಿ. ಟೆಕ್ನಾಲಜಿಸ್ , ಮೈಲಾರ್ ಇನ್ ಫ್ರಾ, ಸೇರಿದಂತೆ ಹಲವು ಕಂಪೆನಿಗಳುತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಬಳ್ಳಾರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉದ್ಯಮಗಳು ಸ್ಥಾಪನೆಯಾಗಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿಯವರಾದ ಡಾ. ಸೆಲ್ವಕುಮಾರ್, ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ, #KIADB ವ್ಯವಸ್ಥಾಪಕ ನಿರ್ದೇಶಕರಾದ ಡಾ. ಮಹೇಶ್ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular