ಬೆಂಗಳೂರು : ನಾನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ನಾನು ಈ ಸಲ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ, ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದು ಅವರು ಹೇಳಿದರು.
ಸದ್ಯ, ನನಗೆ 91 ವರ್ಷ ವಯಸ್ಸಾಯಿತು, ಓಡಾಡಲು ಕಷ್ಟವಾಗುತ್ತದೆ. ನಾನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಆದರೂ ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದು ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು.