BREAKING : ‘INDIA’ ಮೈತ್ರಿಕೂಟದ ಸಂಚಾಲಕರಾಗಿ ಬಿಹಾರ ಸಿಎಂ ‘ನಿತೀಶ್ ಕುಮಾರ್’ ನೇಮಕ

ಇಂಡಿಯಾ ಮೈತ್ರಿಕೂಟದ ಸಂಚಾಲಕರಾಗಿ ಬಿಹಾರ ಸಿಎಂ ನಿತೀಶ್ ಕುಮಾರ್ ನೇಮಕಗೊಂಡಿದ್ದಾರೆ. ವರ್ಚುವಲ್ ಮೂಲಕ ನಡೆಯುತ್ತಿರುವ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕಕ್ಕೆ ನಿತೀಶ್ ಕುಮಾರ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.  ಹಾಗೆಯೇ  ಇಂಡಿಯಾ ಮೈತ್ರಿಕೂಟದ ಸಂಚಾಲಕರಾಗಿ ಬಿಹಾರ ಸಿಎಂ ನಿತೀಶ್ ಕುಮಾರ್ ನೇಮಕಗೊಂಡಿದ್ದಾರೆ.

ದೆಹಲಿಯಲ್ಲಿ ಶನಿವಾರ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಹುಮತದೊಂದಿಗೆ ಮೈತ್ರಿಕೂಟದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ . ಹಾಗೆ ಇಂಡಿಯಾ ಮೈತ್ರಿಕೂಟದ ಸಂಚಾಲಕರಾಗಿ ನಿತೀಶ್ ಕುಮಾರ್ ನೇಮಕಕ್ಕೆ ಕೂಡ ಸಭೆಯಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿದೆ.

14 ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದ ವರ್ಚುವಲ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತು ಚರ್ಚಿಸುವುದು ಸಭೆಯ ಕಾರ್ಯಸೂಚಿಯಾಗಿತ್ತು. ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸಭೆಗೆ ಗೈರಾಗಿದ್ದರು.ಈ ಹಿಂದೆ, ಜನತಾದಳ (ಯುನೈಟೆಡ್) ಮುಖ್ಯ ರಾಷ್ಟ್ರೀಯ ವಕ್ತಾರ ಕೆ.ಸಿ.ತ್ಯಾಗಿ ಅವರು ಸಂಚಾಲಕರ ನೇಮಕದ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳದ ಕಾರಣ ಕಳವಳ ವ್ಯಕ್ತಪಡಿಸಿದರು. ಪಕ್ಷದ ಮುಖ್ಯಸ್ಥ ನಿತೀಶ್ ಕುಮಾರ್ ಅವರನ್ನು ಬಣದ ಸಂಚಾಲಕರನ್ನಾಗಿ ನೇಮಿಸಬೇಕೆಂದು ಪಕ್ಷವು ಪ್ರತಿಪಾದಿಸುತ್ತಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read