ಕುಮಟಾ : ‘ನೀನು ಬರ್ಲಿ, ಇಲ್ಲ ಬಿಡಲಿ, ರಾಮ ಜನ್ಮಭೂಮಿ ಏನೂ ನಿಲ್ಲೋದಿಲ್ಲ ಮಗನೇ ‘ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆ ಏಕವಚನದಲ್ಲಿ ವಾಗ್ಧಾಳಿ ನಡೆಸಿದ್ದಾರೆ.
ಮೊದಲು ಅಯೋಧ್ಯೆಗೆ ಹೋಗಲ್ಲ ಅಂದಿದ್ದವರು ಈಗ ಹೋಗುತ್ತೇನೆ ಎನ್ನುತ್ತಿದ್ದಾರೆ. ಇದು ಹಿಂದೂ ಸಮಾಜದ ತಾಕತ್ತು, ದಮ್ ಎಂದು ಹೆಗಡೆ ಹೇಳಿದರು.ಕಾಂಗ್ರೆಸ್ ನಮ್ಮ ವಿರೋಧಿ ಅಲ್ವೆ ಅಲ್ಲ.ಹಿಂದೂ ವಿರೋಧಿಗಳು, ಸನಾತನ ಧರ್ಮ ವಿರೋಧಿಗಳು ನಮ್ಮ ವಿರೋಧಿಗಳು, ಕಾಂಗ್ರೆಸ್ ನಮ್ಮ ವಿರೋಧಿ ಅಲ್ಲ, ಸಿದ್ದರಾಮಯ್ಯ ನಮ್ಮ ವಿರೋಧಿ ಎಂದರು.
ಹಿಂದೂ ಸಮಾಜ ಒಡೆದು ಒಡೆದು ಹಾಕಿದರೂ ಈಗ ನಾವು ಹಿಂದೆ ಸರಿಯುವ ಪ್ರಶ್ನೆಯೆ ಇಲ್ಲ. ಶತಮಾನಗಳು ಕಳೆದ ಬಳಿಕವೂ ಹಿಂದೂ ಸಮಾಜ ಒಡೆಯುವ ಕೆಲಸ ಆಗಬಾರದು ಎಂದರು.