HomeKarnatakaBIG UPDATE: ನವಿಲುಗಳ ಮಾರಣ ಹೋಮ ಪ್ರಕರಣ; ಓರ್ವ ಆರೋಪಿ ಅರೆಸ್ಟ್; ಇಬ್ಬರು ಎಸ್ಕೇಪ್

BIG UPDATE: ನವಿಲುಗಳ ಮಾರಣ ಹೋಮ ಪ್ರಕರಣ; ಓರ್ವ ಆರೋಪಿ ಅರೆಸ್ಟ್; ಇಬ್ಬರು ಎಸ್ಕೇಪ್

ಬೆಳಗಾವಿ: ಕಬ್ಬಿನ ಗದ್ದೆಯಲ್ಲಿ ನವಿಲುಗಳ ಮಾರಣ ಹೋಮ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಇಬ್ಬರು ಪರಾರಿಯಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹೊರವಲಯದಲ್ಲಿ ಕಬ್ಬಿನ ಗದ್ದೆಯಲ್ಲಿ 8 ನವಿಲುಗಳ ಮೃತದೇಹ ಪತ್ತೆಯಾಗಿತ್ತು. ನವಿಲುಗಳಿಗೆ ವಿಷವುಣಿಸಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಝಳಕಿ ಗ್ರಾಮದ ನಿವಾಸಿ ಮಂಜುನಾಥ್ ಪವಾರ್ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ನವಿಲು ಮಾಂಸಕ್ಕಾಗಿ ಮೆಕ್ಕೆಜೋಳದ ಕಾಳುಗಳಲ್ಲಿ ವಿಷ ಬೆರೆಸಿ ನವಿಲುಗಳನ್ನು ಕೊಲ್ಲಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣದ ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular