ಹಾವೇರಿ : ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದ ಬೆನ್ನಲ್ಲೇ ಮತ್ತೊಂದು ಕಿಡ್ನ್ಯಾಪ್ ಪ್ರಕರಣ ದಾಖಲಾಗಿದೆ.
ಅನ್ಯಕೋಮಿನ ಯುವಕರು ನನ್ನ ಮಗಳನ್ನು ಅಪಹರಿಸಿದ್ದಾರೆ ಎಂದು ಯುವತಿಯ ತಂದೆಯೊಬ್ಬರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅನ್ಯಕೋಮಿನ ಯುವಕ ಅಫ್ತಾಬ್ ವಿರುದ್ಧ ಯುವತಿಯ ತಂದೆ ಹಾನಗಲ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಿದ್ದಾರೆ. ವಿದ್ಯಾರ್ಥಿನಿಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ.
ನನ್ನ ಮಗಳನ್ನು ಹಾನಗಲ್ ಪಟ್ಟಣದ ನಿವಾಸಿ ಅಫ್ತಾಬ್ ಎಂಬಾತ ಕಿಡ್ನ್ಯಾಪ್ ಮಾಡಿದ್ದಾನೆ ಎಂದು ಯುವತಿಯ ತಂದೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.ಹಾವೇರಿಯಲ್ಲಿ ಮುಸ್ಲಿಂ ಮಹಿಳೆ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ನಾಲ್ವರನ್ನು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಮತ್ತೊಂದು ಕಿಡ್ನ್ಯಾಪ್ ಪ್ರಕರಣ ದಾಖಲಾಗಿದೆ.