![](https://kannadadunia.com/wp-content/uploads/2024/01/Guarantee-Schemes.jpg)
ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಗ್ಯಾರಂಟಿ ಯೋಜನೆಗಳಿಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ವ್ಯಕ್ತವಾಗಿದ್ದು, ಈವರೆಗೆ 1.50 ಕುಟುಂಬಗಳಿಗೆ ನೆರವು ನೀಡಲಾಗಿದೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ ಯೋಜನೆಯಡಿ ರಾಜ್ಯಾದ್ಯಂತ ಈವರೆಗೆ ೧.೫೦ ಕುಟುಂಬಗಳಿಗೆ ನೆರವು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಯುರೋಪ್ ದೇಶಗಳಲ್ಲಿ ಸಾರ್ವತ್ರಿಕ ಮೂಲ ಆದಾಯ ಎಂಬ ತತ್ವವನ್ನು ರಾಜ್ಯದಲ್ಲೂ ಅಳವಡಿಸಿ, ಅನುಸರಿಸಿದ್ದೇವೆ. ಐದು ಗ್ಯಾರಂಟಿ ಯೋಜನೆಗಳಿಂದ 1.50 ಕೋಟಿ ಕುಟುಂಬಗಳು ಪ್ರತಿ ತಿಂಗಳಿಗೆ 5,000 ರೂ. ನಿಂದ 6,000 ರೂ.ವರೆಗೆ ನೆರವು ಪಡೆಯುತ್ತಿವೆ ಎಂದು ಹೇಳಿದ್ದಾರೆ.
ಶಕ್ತಿ ಯೋಜನೆ
ರಾಜ್ಯ ಸರ್ಕಾರದ ಮೊದಲ ಗ್ಯಾರಂಟಿ ಯೋಜನೆಯಾದ ಶಕ್ತಿ ಯೋಜನೆ, ಈ ಯೋಜನೆಯಡಿ ರಾಜ್ಯಾದ್ಯಂತ ಮಹಿಳೆಯರಿಗೆ ರಾಜ್ಯ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
ಗೃಹಲಕ್ಷ್ಮಿ ಯೋಜನೆ
ಯಜಮಾನಿ ಮಹಿಳೆಯರಿಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿ ಮಹಿಳೆಯರಿಗೆ ಸರ್ಕಾರದಿಂದ ಸಹಾಯ ಧನವಾಗಿ 2000 ಹಣವನ್ನು ಪ್ರತಿ ತಿಂಗಳು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
ಗೃಹಜ್ಯೋತಿ ಯೋಜನೆ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ.
ಯುವನಿಧಿ ಯೋಜನೆ
ಡಿಪ್ಲೋಮಾ, ಪದವೀಧರರಿಗೆ ರಾಜ್ಯ ಸರ್ಕಾರವು ಯುವನಿಧಿ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ಡಿಪ್ಲೋಮಾ, ಪದವಿ ತೇರ್ಗೆಯಾದ ಫಲಾನುಭವಿಗಳಿಗೆ ಪ್ರತಿತಿಂಗಳು, 1,500 ರೂ. ಹಾಗೂ 3,000 ರೂ. ನಿರುದ್ಯೋಗ ಭತ್ಯೆ ನೀಡಲಾಗುತ್ತದೆ.