![](https://kannadadunia.com/wp-content/uploads/2023/07/muniyappa.png)
ಬೆಂಗಳೂರು : ಇನ್ನೊಂದು ವರ್ಷದಲ್ಲಿ ಬಯಲು ಸೀಮೆಗೆ ಎತ್ತಿನ ಹೊಳೆ ನೀರು ದೊರಕಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೊಂದು ವರ್ಷದಲ್ಲಿ ಎತ್ತಿನಹೊಳೆ ಯೋಜನೆ ಪೂರ್ಣಗೊಂಡು ಬಯಲು ಸೀಮೆ ಜನರಿಗೆ ಕುಡಿಯುವ ನೀರು ದೊರಕಲಿದೆ. ಮೇಕೆದಾಟು ಯೋಜನೆಯೂ ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.
ಎತ್ತಿನಹೊಳೆ ಯೋಜನೆಯ ಜವಾಬ್ದಾರಿಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಹೊತ್ತಿದ್ದು, ತಾಲೂಕಿನ ಕುಂದಾಣದಲ್ಲಿ ದೊಡ್ಡ ಟ್ಯಾಂಕ್ ಕಟ್ಟಿ ಈ ಭಾಗದ ಎಲ್ಲರಿಗೂ ಕುಡಿಯುವ ನೀರು ಪೂರೈಸಲಾಗುವುದು ಎಂದು ಹೇಳಿದ್ದಾರೆ.