![](https://kannadadunia.com/wp-content/uploads/2024/01/mysore-sandal-soap.jpg)
ಹೈದರಾಬಾದ್ : ಹೈದರಾಬಾದ್ ನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಸುತ್ತಿದ್ದ ಕಂಪನಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ.
ಹೈದರಾಬಾದ್ ನಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಗಳ ನಕಲಿಯನ್ನು ಮಾರಾಟ ಮಾಡಲಾಗುತ್ತಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹಾಗೂ ಕೆಎಸ್ ಡಿಎಲ್ ಗೆ ಅನಾಮಧೇಯ ವ್ಯಕ್ತಿಯೊಬ್ಬರು ಕರೆ ಮಾಡಿ ದೂರು ನೀಡಿದ್ದರು. ಇದನ್ನು ಆಧರಿಸಿ ತನಿಖೆ ಆರಂಭಿಸಿದ ಕೆಎಸ್ ಡಿಎಲ್ ಅಧಿಕಾರಿಗಳು ಹಾಗೂ ಹೈದರಾಬಾದ್ ಪೊಲೀಸರು ಈ ನಕಲಿ ಸೋಪ್ ದಂಧೆಯನ್ನು ಭೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಕ್ರಮವಾಗಿ ಕಂಪನಿ ನಡೆಸುತ್ತಿದ್ದ ಮಹಾವೀರ್ ಜೈನ್ ಹಾಗೂ ರಾಕೇಶ್ ಜೈನ್ ಎಂಬ ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಸೋಪು, ಬಾಕ್ಸ್ ಗಳು ಸೇರಿದಂತೆ ಸುಮಾರು ಎರಡು ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.