![](https://kannadadunia.com/wp-content/uploads/2021/09/jobs_3.jpg)
ಬೆಂಗಳೂರು : ಸಂಕ್ರಾಂತಿ ಹಬ್ಬಕ್ಕೆ ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಡ್ಡಾಯಗೊಳಿಸುವ ಸಂಬಂಧ ಸರ್ಕಾರ ಮಹತ್ವದ ತೀರ್ಮಾನಕ್ಕೆ ಮುಂದಾಗಿದೆ.
ಕಾರ್ಮಿಕರ ಇಲಾಖೆಯು ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಹಾಗೂ ಸರ್ಕಾರಿ ಹುದ್ದೆಗಳಲ್ಲಿ ಅಂಗವಿಕಲರಿಗೆ ಉದ್ಯೋಗ ಕಡ್ಡಾಯಗೊಳಿಸಲು ಸರ್ಕಾರ ಮುಂದಾಗಿದೆ. ಈಗಾಗಲೇ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಸ್ಪ್ಯಾಂಡಿಂಗ್ ಅರ್ಡರ್ ನಲ್ಲಿ ಬದಲಾವನೇ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವುದಕ್ಕೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯ ಸರ್ಕಾರವು ರಾಜ್ಯದಲ್ಲಿ ಯಾವುದೇ ಉದ್ಯಮ ಸ್ಥಾಪನೆ ಮಾಡುವ ಉದ್ಯಮಿಗಳು ಕನ್ನಡಿಗರು ಹಾಗೂ ಅಂಗವಿಕಲಿರಗೆ ಕಡ್ಡಾಯವಾಗಿ ಉದ್ಯೋಗ ನೀಡುವುದಕ್ಕೆ ಸಂಬಂಧಿಸಿದಂತೆ ಸ್ಪ್ಯಾಂಡಿಗ್ ಅರ್ಡರ್ ನಲ್ಲಿಯೇ ಬದಲಾವಣೆ ತರಲು ತೀರ್ಮಾನಿಸಿದೆ.