ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ಸೂಪರ್ ಸ್ಮ್ಯಾಶ್ ಟಿ 20 ಟೂರ್ನಿಯಲ್ಲಿ ವೆಲ್ಲಿಂಗ್ಟನ್ ಹಾಗೂ ಸೆಂಟ್ರಲ್ ಡಿಸ್ಟ್ರಿಕ್ಟ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಅದ್ಭುತ ಕ್ಯಾಚ್ ಭಾರೀ ವೈರಲ್ ಆಗಿದೆ.
ನ್ಯೂಝಿಲೆಂಡ್ನಲ್ಲಿ ನಡೆಯುತ್ತಿರುವ ಸೂಪರ್ ಸ್ಮ್ಯಾಶ್ ಟಿ20 ಲೀಗ್ ಪಂದ್ಯದಲ್ಲಿ ವೆಲ್ಲಿಂಗ್ಟನ್ ಹಾಗೂ ಸೆಂಟ್ರಲ್ ಡಿಸ್ಟ್ರಿಕ್ಟ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ವೆಲ್ಲಿಂಗ್ಟನ್ ತಂಡವು ಮೊದಲು ಬ್ಯಾಟ್ ಮಾಡಿ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 147 ರನ್ ಕಲೆಹಾಕಿತು.
148 ರನ್ಗಳ ಗುರಿಯನ್ನು ಬೆನ್ನತ್ತಿದ ಸೆಂಟ್ರಲ್ ಡಿಸ್ಟ್ರಿಕ್ಟ್ಸ್ ಪರ ವಿಲ್ ಯಂಗ್ ಹಾಗೂ ಜಾಕ್ ಬೊಯೆಲ್ ಇನಿಂಗ್ಸ್ ಆರಂಭಿಸಿದರು. ಮೈಕೆಲ್ ಸ್ನೆಡೆನ್ ಎಸೆದ ಪಂದ್ಯದ 6ನೇ ಓವರ್ನ 2ನೇ ಎಸೆತವನ್ನು ವಿಲ್ ಯಂಗ್ ಭರ್ಜರಿ ಸಿಕ್ಸರ್ ಹೊಡೆಯಲು ಹೋಗಿದ್ದಾರೆ. ಈ ವೇಳೆ ಫೀಲ್ಡಿಂಗ್ ಮಾಡುತ್ತಿದ್ದ ಟ್ರಾಯ್ ಜಾನ್ಸನ್ 30 ಯಾರ್ಡ್ ಸರ್ಕಲ್ನಿಂದ ಓಡಿ ಬಂದು ಅದ್ಭುತ ಕ್ಯಾಚ್ ಹಿಡಿದಿದ್ದಾರೆ. ಸದ್ಯ ಈ ಕ್ಯಾಚ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
https://twitter.com/i/status/1746122292407730284