HomeKarnatakaBIG NEWS: ಕೊಟ್ಟಿಗೆಯಲ್ಲಿ ಬೆಂಕಿ ಅವಘಡ; 9 ಹಸುಗಳು, 20 ಮೇಕೆಗಳು ಸಜೀವದಹನ

BIG NEWS: ಕೊಟ್ಟಿಗೆಯಲ್ಲಿ ಬೆಂಕಿ ಅವಘಡ; 9 ಹಸುಗಳು, 20 ಮೇಕೆಗಳು ಸಜೀವದಹನ

ತುಮಕೂರು: ಕೊಟ್ಟಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿ 9 ಹಸುಗಳು, 20 ಮೇಕೆಗಳು ಸಜೀವದಹನಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕಾರನಹಳ್ಳಿ ನಿವಾಸಿ ಚಿಕ್ಕಣ್ಣ ಎಂಬುವವರಿಗೆ ಸೇರಿದ ಕೊಟ್ಟಿಗೆಯಲ್ಲಿ ಈ ದುರಂತ ಸಂಭವಿಸಿದೆ. ಕೊಟ್ಟಿಗೆಯಲ್ಲಿದ್ದ 9 ಹಸುಗಳು, 20 ಮೇಕೆಗಳು ಬೆಂಕಿಗಾಹುತಿಯಾಗಿದ್ದು, 5 ಜಾನುವಾರುಗಳನ್ನು ರಕ್ಷಿಸಲಾಗಿದೆ.

ಕೊಟ್ಟಿಗೆ ಬಳಿ ಇದ್ದ ಕೃಷಿ ಉಪಕರಣಗಳು, ಅಡಿಕೆ, ಒಂದು ಟ್ರ್ಯಾಕ್ಟರ್ ಕೂಡ ಬೆಂಕಿಗಾಹುತಿಯಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular