ನವದೆಹಲಿ: ಲೋಕಸಭೆ ಚುನಾವಣೆ ಹೊತ್ತಲ್ಲೇ ಕಾಮಗ್ರೆಸ್ ಗೆ ಬಿಗ್ ಶಾಕ್, ಪಕ್ಷದ ಹಿರಿಯ ಮುಖಂಡ ಮತ್ತು ಮಾಜಿ ಲೋಕಸಭಾ ಸಂಸದ ಮಿಲಿಂದ್ ದಿಯೋರಾ ಭಾನುವಾರ ಕಾಂಗ್ರೆಸ್ ತೊರೆದಿದ್ದಾರೆ.
ಈ ನಿರ್ಧಾರವನ್ನು ಪ್ರಕಟಿಸಿದ ದಿಯೋರಾ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಹೀಗೆ ಬರೆದಿದ್ದಾರೆ: ‘ಇಂದು ನನ್ನ ರಾಜಕೀಯ ಪ್ರಯಾಣದಲ್ಲಿ ಮಹತ್ವದ ಅಧ್ಯಾಯದ ಮುಕ್ತಾಯವನ್ನು ಸೂಚಿಸುತ್ತದೆ. ಪಕ್ಷದೊಂದಿಗಿನ ನನ್ನ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸುವ ಮೂಲಕ ನಾನು @INCIndia ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಹಲವು ವರ್ಷಗಳಿಂದ ಬೆಂಬಲ ನೀಡಿದ ಎಲ್ಲ ನಾಯಕರು, ಸಹೋದ್ಯೋಗಿಗಳು ಮತ್ತು ಕಾರ್ಯಕರ್ತರಿಗೆ ನಾನು ಆಭಾರಿಯಾಗಿದ್ದೇನೆ ಎಂದು ಹೇಳಿದ್ದಾರೆ.
2014 ಮತ್ತು 2019 ರಲ್ಲಿ ಸತತ ಎರಡು ಲೋಕಸಭಾ ಚುನಾವಣೆಗಳಲ್ಲಿ ಶಿವಸೇನೆಯ ಅರವಿಂದ್ ಸಾವಂತ್ ವಿರುದ್ಧ ಸೋತಿರುವ ದಿಯೋರಾ, ಮಹಾ ವಿಕಾಸ್ ಅಘಾಡಿ ಸೀಟು ಹಂಚಿಕೆ ವ್ಯವಸ್ಥೆಗಳಲ್ಲಿ ಮುಂಬೈ ದಕ್ಷಿಣ ಸ್ಥಾನವು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಗೆ ಹೋಗುವ ಸಾಧ್ಯತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.