![](https://kannadadunia.com/wp-content/uploads/2021/10/basavaraj-bommai-main-1.jpg)
ಹಾವೇರಿ: ಹಾನಗಲ್ ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣವನ್ನು ಮುಚ್ಚಿ ಹಾಕಲು ಪೊಲೀಸರು ಯತ್ನಿಸಿದ್ದರು ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಮಾಜಿ ಸಿಎಂ ಬೊಮ್ಮಾಯಿ, ಸಾಮೂಹಿಕ ಅತ್ಯಾಚಾರ ಪ್ರಕರಣ ಮುಚ್ಚಿ ಹಾಕುವ ಪೊಲೀಸರ ಯತ್ನ ವಿಫಲವಾಗಿದೆ. ಸಂತ್ರಸ್ತೆಗೆ ಹಣ ಕೊಟ್ಟು ಪ್ರಕರಣವನ್ನು ಹಿಂಪಡೆಯುವಂತೆ ಹೇಳಿದ್ದರು. ಈ ವಿಚಾರ ಇದೀಗ ಬಹಿರಂಗವಾಗಿದೆ. ಸ್ಥಳೀಯ ಪೊಲೀಸರು ಪ್ರಕರಣ ಮುಚ್ಚಿ ಹಾಕುವ ಯತ್ನ ಮಾಡಿದ್ದಾರೆ ಎಂದು ಕಿಡಿಕಾರಿದರು.
ಪ್ರಕರಣದ ತನಿಖೆಯನ್ನು ಎಸ್ ಐಟಿಗೆ ಕೊಡಬೇಕು. ತನಿಖೆ ನೆಪದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಪೊಲೀಸರಿಂದ ನಾವೇನೂ ನಿರೀಕ್ಷೆ ಮಾಡಲು ಆಗಲ್ಲ ಎಂದು ಹೇಳಿದರು.