ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ಮಹಿಳೆಯ ಮೇಲೆ ಗ್ಯಾಂಗ್ ರೇಪ್ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ. ಪ್ರಕರಣ ದಿನದಿಂದ ದಿನಕ್ಕೆ ಬೇರೆ ಬೇರೆ ತಿರುವು ಪಡೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಹಾನಗಲ್ ಗ್ಯಾಂಗ್ ರೇಪ್ ಸಂತ್ರಸ್ತೆಯನ್ನು ಭೇಟಿಯಾಗಲು ಬಿಜೆಪಿ ಮಹಿಳ ಆಯೋಗದ ತಂಡ ತೆರಳಿದೆ. ಆದರೆ ಸಂತ್ರಸ್ತೆಯ ಭೇಟಿಗೆ ಅವಕಾಶ ನೀಡುತ್ತಿಲ. ಅಲ್ಲಿನ ಪೊಲೀಸರು ಆಕೆಯನ್ನು ಬೇರೆಡೆ ಶಿಫ್ಟ್ ಮಾಡಿದ್ದಾರೆ. ಸ್ಥಳೀಯ ಪೊಲಿಸರು ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ದಾದಾಗಿರಿ ಶುರುವಾಗಿದೆ. ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ನಾವು ಹೋರಾಟ ಮಾಡುತ್ತೇವೆ ಎಂದು ಹೇಳಿದರು.