![](https://kannadadunia.com/wp-content/uploads/2022/10/breaking-news-poster-design-template-d020bd02f944a333be71e17e3a38db24_screen-1.jpg)
ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಮಹಿಳಾ ಪ್ರಯಾಣಿಕರು ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನ ದಾಸರಹಳ್ಳಿ ಬಳಿ ಬಿಎಂಟಿಸಿ ಬಸ್ ಕಂಡಕ್ಟರ್ ಸುಕನ್ಯಾ ಎಂಬುವರ ಮೇಲೆ ಮಹಿಳಾ ಪ್ರಯಾಣಿಕರು ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಗಾಯಗೊಂಡಿರುವ ಮಹಿಳಾ ಕಂಡಕ್ಟರ್ ಸುಕನ್ಯಾ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಡಿಪೋ ಸಂಖ್ಯೆ 40 ಕ್ಕೆ ಸೇರಿದ ಬಿಎಂಟಿಸಿ ಬಸ್ ನಲ್ಲಿ ಘಟನೆ ನಡೆದಿದೆ. ಟಿಕೆಟ್ ಪಡೆಯದೇ ಹಾಗೆಯೇ ಕುಳಿತದ್ದ ಮಹಿಳೆಯರು, ಟಿಕೆಟ್ ತೆಗೆದುಕೊಳ್ಳುವಂತೆ ಹೇಳಿದ್ದಕ್ಕೆ ಕಂಡಕ್ಟರ್ ಸುಕನ್ಯಾ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ.
ಘಟನೆ ಸಂಬಂಧ ಸುಕನ್ಯಾ ಅವರು ಪೀಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು, ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.