HomeLive Newsಇಂದು ಭಾರತ ಮತ್ತು ಅಫ್ಘಾನಿಸ್ತಾನ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ

ಇಂದು ಭಾರತ ಮತ್ತು ಅಫ್ಘಾನಿಸ್ತಾನ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ

ಭಾರತದ ತಂಡ ಈಗಾಗಲೇ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ  ಆರು ವಿಕೆಟ್ಗಳಿಂದ ಭರ್ಜರಿ ಜಯಸಾಧಿಸಿದೆ. ಇಂದು ಎರಡನೇ ಟಿ ಟ್ವೆಂಟಿ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ಉತ್ಸಾಹದಲ್ಲಿದ್ದರೆ, ಆಫ್ಘಾನಿಸ್ತಾನ ತಂಡಕ್ಕೆ ಇದು ಮಾಡು ಇಲ್ಲವೇ ಮಡಿ  ಪಂದ್ಯವಾಗಿದೆ. ಮೊದಲ ಪಂದ್ಯದಲ್ಲಿ ಅಲಭ್ಯರಾಗಿದ್ದ  ವಿರಾಟ್ ಕೊಹ್ಲಿ ಮತ್ತು ಆಫ್ಘಾನಿಸ್ತಾನದ ಪ್ರಮುಖ ಸ್ಪಿನ್ನರ್ ರಶೀದ್ ಖಾನ್ ಇಂದು ಕಣಕ್ಕಿಳಿಯುವ ಸಾಧ್ಯತೆ ಇದೆ.

ಇಂಡೋರ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಹನ್ನೊಂದರ ಬಳಗದಲ್ಲಿ ಯಾವೆಲ್ಲ  ಆಟಗಾರನಿಗೆ ಅವಕಾಶ ಸಿಗಲಿದೆ ಕಾದು ನೋಡಬೇಕಾಗಿದೆ. ಟಿ ಟ್ವೆಂಟಿ ವಿಶ್ವಕಪ್ ನಲ್ಲಿ ಸ್ಥಾನ ಪಡೆಯಲು ಯುವ ಆಟಗಾರರು ಸಾಕಷ್ಟು ಕಸರತ್ತು ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular