HomeIndiaBIG NEWS: ಭಾರತ್ ಜೋಡೋ ನ್ಯಾಯ ಯಾತ್ರೆಗೆ ಚಾಲನೆ; ರಾಹುಲ್ ಗಾಂಧಿ ನೇತೃತ್ವದಲ್ಲಿ ಯಾತ್ರೆ ಆರಂಭ

BIG NEWS: ಭಾರತ್ ಜೋಡೋ ನ್ಯಾಯ ಯಾತ್ರೆಗೆ ಚಾಲನೆ; ರಾಹುಲ್ ಗಾಂಧಿ ನೇತೃತ್ವದಲ್ಲಿ ಯಾತ್ರೆ ಆರಂಭ

ಇಂಫಾಲ್: ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲೇಬೇಕೆಂಬ ಗುರಿಯೊಂದಿಗೆ ಕಾಂಗ್ರೆಸ್ ನ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಚಾಲನೆ ನೀಡಲಾಗಿದೆ.

ಮಣಿಪುರದ ಇಂಫಾಲ್ ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಚಾಲನೆ ನೀಡಿದ್ದಾರೆ. ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಯಾತ್ರೆ ಆರಂಭವಾಗಿದೆ.

ಭಾರತ್ ಜೋಡೋ ನ್ಯಾಯ ಯಾತ್ರೆ 15 ರಾಜ್ಯಗಳ 100 ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಕೆಲವೆಡೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಪಾದಯಾತ್ರೆ ಮೂಲಕ ಯಾತ್ರೆ ಸಾಗಲಿದ್ದರೆ ಇನ್ನು ಕೆಲವೆಡೆ ಬಸ್ ಮೂಲಕ ಯಾತ್ರೆ ಸಾಗಲಿದೆ. ಒಟ್ಟು 6,713 ಕಿ.ಮೀ ವರೆಗೆ ನ್ಯಾಯ ಯಾತ್ರೆ ಸಾಗಲಿದ್ದು ಮಹಾರಾಷ್ಟ್ರದ ಮುಂಬೈನಲ್ಲಿ ಯಾತ್ರೆ ಮುಕ್ತಾಯವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕಸಭಾ ಚುನಾವಣೆ ಸಮಿಪಿಸುತ್ತಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆ ಮಹತ್ವ ಪಡೆದುಕೊಂಡಿದೆ.

For Latest News Updates, Join Our Whatsapp Community🚩
RELATED ARTICLES

Most Popular