alex Certify ಇದೇನಾ..? ನಿಮ್ಮ ತಂದೆ-ತಾಯಿ ನಿಮಗೆ ಕಲಿಸಿರುವ ಸಂಸ್ಕೃತಿ : ಅನಂತ್ ಕುಮಾರ್ ಹೆಗಡೆ ವಿರುದ್ಧ ಸಚಿವ ರಾಮಲಿಂಗಾ ರೆಡ್ಡಿ ವಾಗ್ಧಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇದೇನಾ..? ನಿಮ್ಮ ತಂದೆ-ತಾಯಿ ನಿಮಗೆ ಕಲಿಸಿರುವ ಸಂಸ್ಕೃತಿ : ಅನಂತ್ ಕುಮಾರ್ ಹೆಗಡೆ ವಿರುದ್ಧ ಸಚಿವ ರಾಮಲಿಂಗಾ ರೆಡ್ಡಿ ವಾಗ್ಧಾಳಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಅನಂತ್ ಕುಮಾರ್ ಹೆಗಡೆ ವಿರುದ್ಧ ಸಚಿವ ರಾಮಲಿಂಗಾ ರೆಡ್ಡಿ ವಾಗ್ಧಾಳಿ ನಡೆಸಿದ್ದಾರೆ.

ಲೋಕಸಭಾ ಸದಸ್ಯರಾದ ಅನಂತ್ ಕುಮಾರ್ ಹೆಗಡೆ ಅವರೇ “ಕುಲವಂ ಪೇಳ್ವುದು ನಾಲ್ಗೆ” ಎಂಬ ಮಾತಿನಂತೆ ನಿಮ್ಮ ಸಂಸ್ಕಾರ ಏನು ಎಂಬುದನ್ನು ನೀವಾಡಿರುವ ಮಾತು ಪ್ರತಿಬಿಂಬಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಇದೇ ಏನು ಬಿಜೆಪಿ, ಆರ್ ಎಸ್ ಎಸ್ , ನಿಮ್ಮ ತಂದೆ-ತಾಯಿ ನಿಮಗೆ ಕಲಿಸಿರುವ ಸಂಸ್ಕೃತಿ. ಇದೇ ಏನು ನಿಮ್ಮ ಆಚಾರ-ವಿಚಾರ?”ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ದಿಯ ಬಿಡು ನಾಲಿಗೆ’ ಎಂಬ ದಾಸರವಾಣಿಯನ್ನು ಪರಿಪಾಲಿಸಬೇಕಾದ ಸ್ಥಿತಿಗೆ ನೀವು ಬಂದು ನಿಂತಿರುವುದು ದುರಂತ.”ಮಾತು ಆಡಿದರೆ ಹೋಯಿತು ಎಂದು ಕಿಡಿಕಾರಿದ್ದಾರೆ.

ಮುತ್ತು ಉದುರಿದರೆ ಹೋಯಿತು” ಎಂಬಂತೆ ನೀವು ಮುಖ್ಯಮಂತ್ರಿಗಳ ಬಗ್ಗೆ ಬಳಸಿರುವ ಪದ 6.50 ಕೋಟಿ ಕರ್ನಾಟಕದ ಜನತೆಯನ್ನು ಕುರಿತು ಆಡಿದ ಮಾತಾಗಿರುತ್ತದೆ. ಅವರಿಗೆ ಮಾಡಿದ ಅವಮಾನವಾಗಿತ್ತದೆ.ನೀವು ಆಡಿರುವ ಮಾತು, ಬಳಸಿರುವ ಪದ ನಿಮ್ಮ ಮಾನಸಿಕ ಸ್ಥಿತಿಯ ಪ್ರತೀಕ. ಸಣ್ಣ ಮಾತು ಆಡುವುದರಿಂದ ನೀವು ದೊಡ್ಡವರಾಗುವುದಿಲ್ಲ.

ಕೇಂದ್ರ ಸಚಿವರಾಗಿದ್ದಾಗ ಸಂವಿಧಾನ ಬದಲಿಸುತ್ತೇವೆ, ಅದಕ್ಕಾಗಿಯೇ ಅಧಿಕಾರಕ್ಕೆ ಬಂದಿರುವುದು ಎಂದು ಹೇಳಿದ್ದೀರಿ. ಈಗ ಇಂತಹ ಮಾತು. ನಿಮಗಿದು ಮರ್ಯಾದೆ ತರುವುದಿಲ್ಲ. ಬಿಜೆಪಿ ಪಕ್ಷಕ್ಕೆ ಕಿಂಚಿತ್ತಾದರೂ ಮಾನ-ಮರ್ಯಾದೆ, ಆಚಾರ ವಿಚಾರ ಇದ್ದರೆ ನಿಮ್ಮ ಮೇಲೆ ಶಿಸ್ತು ಕ್ರಮಜರುಗಿಸಬೇಕು. ನೀವು ನಾಡಿನ ಜನರ ಕ್ಷಮೆ ಕೇಳಬೇಕು.

ನಿಮಗೆ ಸಂಸದರಲ್ಲ, ಯಾವುದೇ ಚುನಾಯಿತ ಪ್ರತಿನಿಧಿ ಆಗುವ ಯೋಗ್ಯತೆಯೂ ಇಲ್ಲ.ಬೇರೆಯವರಿಗೂ ಮಾತಾಡಲು ಬರುತ್ತದೆ. ಆದರೆ ನಿಮ್ಮ ಮಟ್ಟಕ್ಕೆ ಇಳಿಯುವುದು ಅನಾಗರಿಕತೆ ಆಗುತ್ತದೆ.ಇಷ್ಟು ದಿನ ಅಡ್ರೆಸ್ ಇಲ್ಲದಂತೆ ಕಳೆದು ಹೋಗಿದ್ದ ತಾವು ಈಗ ಚುನಾವಣೆ ಸಮಯದಲ್ಲಿ ಮತ ಗಳಿಸಲು ರೋಷ, ಆವೇಶದ ಮಾತುಗಳನ್ನು ಆಡುತ್ತಿದ್ದೀರಿ ಎಂಬುದನ್ನು ಅರ್ಥ ಮಾಡಿಕೊಳ್ಳದೆ ಇರುವಷ್ಟು ಜನ ದಡ್ಡರಲ್ಲ. ಈ ಬಾರಿ ತಮಗೆ ತಕ್ಕ ಪಾಠ ಕಲಿಸುತ್ತಾರೆ. ನಿಮ್ಮನ್ನು ಶಾಶ್ವತವಾಗಿ ಅಡ್ರೆಸ್ ಗೆ ಇಲ್ಲದಂತೆ ಮಾಡುತ್ತಾರೆ. ನೋಡ್ತಾ ಇರಿ ಎಂದು ಅನಂತ್ ಕುಮಾರ್ ಹೆಗಡೆ ವಿರುದ್ಧ ಸಚಿವ ರಾಮಲಿಂಗಾ ರೆಡ್ಡಿ ವಾಗ್ಧಾಳಿ ನಡೆಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...