ಬೆಂಗಳೂರು : ಸಂಕ್ರಾಂತಿ ಹಬ್ಬದ ದಿನ ಇಂದು ಸಿಎಂ ಸಿದ್ದರಾಮಯ್ಯ ಹಾವೇರಿ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಸಿಎಂ ಸಿದ್ದರಾಮಯ್ಯ ಅವರು ಅಂಬಿಗರ ಚೌಡಯ್ಯ ಜಯಂತಿ, ಶರಣ ಸಂಸ್ಕೃತಿ ಉತ್ಸವದಲ್ಲಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಹಾವೇರಿ ಜಿಲ್ಲೆ ರಾಣಿಬೆನ್ನೂರು ತಾಲೂಕಿನ ನರಸೀಪುರ ಬಳಿ ಹ್ಯಾಲಿ ಪ್ಯಾಡ್ ಗೆ ಆಗಮಿಸುವ ಸಿಎಂ ಸಿದ್ದರಾಮಯ್ಯ ನರಸೀಪುರದ ಅಂಬಿಗರ ಪೀಠದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಬಳಿಕ ಚಿಕ್ಕ ಬಾಸೂರಿನ ಶರಣ ಸಂಸ್ಕೃತಿ ಉತ್ಸವದಲ್ಲಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ತೆರಳಲಿದ್ದಾರೆ.
ಹಾವೇರಿ ಜಿಲ್ಲೆ, ಬ್ಯಾಡಗಿ ತಾಲೂಕಿನ ಚಿಕ್ಕಬಾಸುರನಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಹೆಲಿಕ್ಯಾಪ್ಟರ್ ನಲ್ಲಿ ಮುಖ್ಯಮಂತ್ರಿ ಹುಬ್ಬಳ್ಳಿಗೆ ತೆರಳಲಿದ್ದಾರೆ. ನಂತರ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.