ತುಮಕೂರು : ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾದ ಘಟನೆ ತುಮಕೂರಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕುಂಟೇನಗೌಡಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದೆ. ರಸ್ತೆ ಬದಿ ಕಾರು ನಿಲ್ಲಿಸಿಕೊಂಡು ಕಾರಿಗೆ ಪಂಚರ್ ಹಾಕುತ್ತಿದ್ದಾಗ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಆವಲಹಳ್ಳಿಯ ಮಹೇಶ್ (40) ಉಮೇಶ್ (40) ಎಂದು ಗುರುತಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.