HomeEntertainmentಸಂಕ್ರಾಂತಿ ಹಬ್ಬಕ್ಕೆ ಹೊಸ ಪೋಸ್ಟರ್ ಬಿಡುಗಡೆ ಮಾಡಿದ 'ಮಾಫಿಯಾ' ಚಿತ್ರ ತಂಡ

ಸಂಕ್ರಾಂತಿ ಹಬ್ಬಕ್ಕೆ ಹೊಸ ಪೋಸ್ಟರ್ ಬಿಡುಗಡೆ ಮಾಡಿದ ‘ಮಾಫಿಯಾ’ ಚಿತ್ರ ತಂಡ

ಲೋಹಿತ್ ನಿರ್ದೇಶನದ ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಬಹುನಿರೀಕ್ಷಿತ ‘ಮಾಫಿಯಾ’ ಚಿತ್ರದ ಹೊಸ ಪೋಸ್ಟರ್ ಇಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿದ್ದು, ಪ್ರಜ್ವಲ್ ದೇವರಾಜ್ ಈ ಪೋಸ್ಟರ್ ನಲ್ಲಿ ಫುಟ್ಬಾಲ್ ಆಟಗಾರನಾಗಿ ಕಾಣಿಸಿಕೊಂಡಿದ್ದಾರೆ. ಇದನ್ನು ವೀಕ್ಷಿಸಿರುವ ಪ್ರಜ್ವಲ್ ದೇವರಾಜ್ ಅಭಿಮಾನಿಗಳಲ್ಲಿ ಸಾಕಷ್ಟು  ಕುತೂಹಲ ಮೂಡಿಸಿದೆ.

ಈ ಚಿತ್ರವನ್ನು ಕುಮಾರ್ ಬಿ ನಿರ್ಮಾಣ ಮಾಡಿದ್ದು, ಪ್ರಜ್ವಲ್ ದೇವರಾಜ್ ಗೆ ಜೋಡಿಯಾಗಿ ಅದಿತಿ ಪ್ರಭುದೇವ ಅಭಿನಯಿಸಿದ್ದಾರೆ.

ಸಿ ರವಿಚಂದ್ರನ್ ಸಂಕಲನ ಹಾಗೂ ಪಂಡಿ ಕುಮಾರ್ ಛಾಯಾಗ್ರಹಣವಿದೆ. ಅನೂಪ್ ಸೀಳಿನ್ ಸಂಗೀತ ಸಂಯೋಜನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular