
ಈ ಬಳಿಕ ನಟ ದುನಿಯಾ ವಿಜಯ್ ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ್ದಾರೆ. ಈ ಬಾರಿ ವಿಜಯ್ ತನ್ನ ಹುಟ್ಟೂರಾದ ಕುಂಬಾರನಹಳ್ಳಿಯಲ್ಲಿ ಜನವರಿ 20 ರಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಈ ಹಿನ್ನೆಲೆ ಮಾತನಾಡಿದ ದುನಿಯಾ ವಿಜಯ್ ನಿಮಗೆ ಕೈ ಮುಗಿದು ಕೇಳಿಕೊಳ್ಳುತ್ತೇನೆ, ಯಾರು ನನ್ನ ಹುಟ್ಟುಹಬ್ಬದ ದಿನ ಫ್ಲೆಕ್ಸ್ ಬ್ಯಾನರ್ ಹಾಕಬೇಡಿ… ಯಾರೂ ಕೂಡ ಈ ಬಾರಿ ನಡೆದುಕೊಂಡು ಬರಬೇಡಿ, ಕೇಕ್ ಮತ್ತು ಹೂವಿನ ಹಾರ ತರಬೇಡಿ. ನನಗೆ ನಿಮ್ಮ ಜೊತೆಗೆ ಕುಳಿತು ಪ್ರೀತಿಯಿಂದ ಊಟ ಮಾಡುವ ಆಸೆಯಿದೆ ಎಂದು ಹೇಳಿದ್ದಾರೆ.
ಈ ಬಾರಿ ವಿಜಯ್ ತನ್ನ ಹುಟ್ಟೂರಾದ ಕುಂಬಾರನಹಳ್ಳಿಯಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದು, ಅಲ್ಲಿಯೇ ಅಭಿಮಾನಿಗಳನ್ನು ಭೇಟಿಯಾಗಲಿದ್ದಾರೆ.

